'ಮೈಸೂರು ಮಿನರಲ್ಸ್ ಕಂಪನಿ’ಯ ಹಗರಣ ಕುರಿತು ಎಚ್ ಡಿಕೆ ಹೇಳಿದ್ದೇನು?

'ಮೈಸೂರು ಮಿನರಲ್ಸ್ ಕಂಪನಿಯಲ್ಲಿ ನಡೆದ ದೊಡ್ಡ ಭ್ರಷ್ಟಾಚಾರದ ಹಗರಣದ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದರು.
ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, 'ಡಿಸೆಂಬರ್ 18 ರ ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಈ ಸರ್ಕಾರದ ದೊಡ್ಡ ಹಗರಣವನ್ನು ದಾಖಲೆ ಸಮೇತ ಜನರ ಮುಂದಿಡುತ್ತೇನೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದ ಸಂಪತ್ತನ್ನು ಹೇಗೆ ಲೂಟಿ ಹೊಡೆದಿದ್ದಾರೆ? ಎಂಬುದು ಹಗರದ ಮೂಲಕದ ಬೆಳಕಿಗೆ ಬರಲಿದೆ' ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.'ಗುಜರಾತ್ ವಿಧಾನಸಭೆ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗಲಿದೆ. ಗುಜರಾತ್‌ನಲ್ಲಿ ಯಾರು ಅಧಿಕಾರಕ್ಕೆ ಬರಲಿದ್ದಾರೆ? ಎಂಬ ಬಗ್ಗೆ ನನಗೆ ಕುತೂಹಲವಿಲ್ಲ' ಎಂದರು. ರಾಜ್ಯದಲ್ಲಿ ಮಹತ್ವದ ಬದಲಾವಣೆಯಾಗುವುದಂತೂ ಖಚಿತ' ಎಂದು ತಿಳಿಸಿದರು.
Comments