ಬಾಲಕೃಷ್ಣ, ಸಿ.ಪಿ.ಯೋಗೇಶ್ವರ್‌ಗೆ ಸೆಡ್ಡು ಹೊಡೆಯಲು ಜೆಡಿಎಸ್ ರಣತಂತ್ರ
ರಾಮನಗರ ಜಿಲ್ಲೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಕನಸಿನ ಜಿಲ್ಲೆ ಎಂದರೆ ತಪ್ಪಿಲ್ಲ. 2007 ಆಗಸ್ಟ್ 23, ರಾಮನಗರ ಕ್ಷೇತ್ರವನ್ನ ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಿ ಜೆಡಿಎಸ್ ಭದ್ರ ಕೋಟೆ ನಿರ್ಮಿಸಿಕೊಂಡಿದ್ದಾರೆ. ರಾಮನಗರ ಸೇರಿದಂತೆ ಕನಕಪುರ, ಮಾಗಡಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳು ಈ ಜಿಲ್ಲೆಗೆ ಸೇರುತ್ತವೆ.
ಮೊದಲಿಗೆ ರಾಮನಗರ ಕ್ಷೇತ್ರದ ರಾಜಕೀಯ ಬೆಳವಣಿಗೆ ನೋಡುವುದಾದರೆ ಕಳೆದ 15 ವರ್ಷಗಳಿಂದ ಈ ಕ್ಷೇತ್ರದ ಶಾಸಕರಾಗಿರುವುದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ. ಕಳೆದ ಮೂರು ಚುನಾವಣೆಗಳಲ್ಲೂ ಎಚ್.ಡಿ.ಕುಮಾರಸ್ವಾಮಿ ರಾಮನಗರ ಕ್ಷೇತ್ರದಲ್ಲಿ ಹೆಚ್ಚಿನ ಪ್ರಚಾರಕ್ಕೆ ಬಾರದಿದ್ದರೂ ಈ ಕ್ಷೇತ್ರದ ಜನ ಗೆಲ್ಲಿಸಿಕೊಂಡು ಬರುತ್ತಿದ್ದಾರೆ. ಪ್ರಸ್ತುತ ರಾಮನಗರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹುಡುಕಾಟ ಆರಂಭಗೊಂಡಿದೆ. ಜಿಲ್ಲಾ ಪಂಚಾಯತಿ ಸದಸ್ಯ ಇಕ್ಬಾಲ್ ಹುಸೇನ್, ಸಂಸದ ಡಿ.ಕೆ.ಸುರೇಶ್ ಹಾಗೂ ವಿಧಾನ ಪರಿಷತ್ ಸದಸ್ಯ ರವಿ ಹೆಸರುಗಳು ಕೇಳಿ ಬರುತ್ತಿದೆ. ಈ ನಡುವೆ ಕುಮಾರಸ್ವಾಮಿಗೆ ಪೈಪೋಟಿ ಕೊಡುವ ಅಭ್ಯರ್ಥಿ ಇಲ್ಲದ ಕಾರಣ ಕಳೆದು ಮೂರು ಚುನಾವಣೆಯಲ್ಲೂ ಗೆಲುವು ಸಾಧಿಸಿಕೊಂಡು ಬರುತ್ತಲೇ ಇದ್ದಾರೆ.ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಹಣ ತೆಗೆದುಕೊಂಡು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬ ಕಾರಣಕ್ಕೆ ಜೆಡಿಎಸ್ ಪಕ್ಷದಿಂದ ಬಾಲಕೃಷ್ಣರನ್ನ ಉಚ್ಛಾಟನೆ ಕೂಡ ಮಾಡಲಾಯಿತು.
ಪಕ್ಷ ದ್ರೋಹ ಕೆಲಸ ಮಾಡಿದವರಿಗೆ ಹೇಗಾದರೂ ಚುನಾವಣೆಯಲ್ಲಿ ಸೋಲಿಸಲೇಬೇಕೆಂದು ಪಣತೊಟ್ಟಿರುವ ಮಾಜಿ ಪ್ರಧಾನಿ ದೇವೇಗೌಡರು ರಣತಂತ್ರ ರೂಪಿಸಿದ್ದಾರೆ. ಕಳೆದ ಬಾರಿ 2013 ರ ಸಾರ್ವತ್ರಿಕ ಚುನಾವಣೆಯಲ್ಲಿ ಶಾಸಕರಿಗೆ ಪೈಪೋಟಿ ಕೊಟ್ಟ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಎ.ಮಂಜುರನ್ನು ಜೆಡಿಎಸ್ ತನ್ನತ್ತ ಸೆಳೆದುಕೊಂಡಿದೆ. ಹೇಗಾದರೂ ಮಾಡಿ ಶತಾಯಗತಾಯ ಬಾಲಕೃಷ್ಣರನ್ನು ಸೋಲಿಸಬೇಕೆಂದು ಜೆಡಿಎಸ್ ಕೂಡ ಭಾರಿ ರಣತಂತ್ರ ರೂಪಿಸುತ್ತಿದೆ.ಡಿ.ಕೆ.ಶಿವಕುಮಾರ್ ಕ್ಷೇತ್ರದಲ್ಲಿ ಎಷ್ಟೆ ಅಭಿವೃದ್ಧಿ ಮಾಡಿದರೂ ಕೂಡ ಕನಕಪುರದಲ್ಲಿ ಜೆಡಿಎಸ್ ಅಭ್ಯರ್ಥಿಗೆ 50 ಸಾವಿರ ಮತಗಳು ಬಂದೆ ಬರುತ್ತೆ. ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್‌ನಿಂದ ತೀವ್ರ ಪ್ರತಿಸ್ಪರ್ಧೆ ಕೊಡುವ ಅಭ್ಯರ್ಥಿ ನಿಂತರೆ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲುವುದರಲ್ಲಿ ಯಾವುದೇ ಅನುಮಾನ ಇಲ್ಲ.
ಕಳೆದ ಬಾರಿ ಯೋಗೇಶ್ವರ್ ವಿರುದ್ಧ ಸೋತ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಧರ್ಮಪತ್ನಿ ಅನಿತಾ ಕುಮಾರಸ್ವಾಮಿಯೇ ಈ ಬಾರಿ ಅಭ್ಯರ್ಥಿ ಎಂದು ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಜೆಡಿಎಸ್‌ನಿಂದ ಅನಿತಾಕುಮಾರಸ್ವಾಮಿ ಈ ಬಾರಿ ಸ್ಪರ್ಧಿಯಾದರೆ ಕಾಂಗ್ರೆಸ್‌ನಿಂದ ಡಿ.ಕೆ.ಸುರೇಶ್ ನಿಲ್ಲುವುದು ಅನುಮಾನ. ಏಕಂದ್ರೆ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ಅಜೆಂಡಾ ಒಂದೇ. ಅದು ಸಿ.ಪಿ.ಯೋಗೇಶ್ವರ್‌ನ್ನ ಸೋಲಿಸುವುದು. ಈ ಅಜೆಂಡಾ ಮುಂದೆ ಇಟ್ಟುಕೊಂಡು ರಣತಂತ್ರ ಹೆಣಿಯಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
Comments