ಪಾರದರ್ಶಕ ಆಡಳಿತಕ್ಕೆ ಒತ್ತು.. ನಗರಸಭೆ ನೂತನ ಅಧ್ಯಕ್ಷ ಪ್ರಭುದೇವ್ ಪದಗ್ರಹಣ




ನಗರಸಭೆಯ ಎಲ್ಲಾ ಸದಸ್ಯರ ವಿಶ್ವಾಸ ಪಡೆದು ಜನತೆಗೆ ಮೂಲಸೌಕರ್ಯ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುವುದಾಗಿ ನೂತನ ಅಧ್ಯಕ್ಷ ತ.ನ. ಪ್ರಭುದೇವ್ ಹೇಳಿದರು. ನಗರಸಭೆಯ ಕಛೇರಿಯಲ್ಲಿ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿ ಮಾತನಾಡಿದರು.
ಶುದ್ಧ ಕುಡಿಯುವ ನೀರು, ವಿದ್ಯುತ್, ರಸ್ತೆ ಮತ್ತಿತರ ಮೂಲಸೌಕರ್ಯಗಳಿಗೆ ಆದ್ಯತೆ ನೀಡಿ ಜನರ ನಂಬಿಕೆ ಉಳಿಸಿಕೊಂಡು, ಬ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಲಾಗುವುದು ಎಂದು ಹೇಳಿದರು.
ಉಪಾಧ್ಯಕ್ಷೆ ಜಯಲಕ್ಷ್ಮಿ ನಟರಾಜ್, ಸ್ಥಾಯಿಸಮಿತಿ ಅಧ್ಯಕ್ಷೆ ಸುಶೀಲ ರಾಘವ, ಮಾಜಿ ಅಧ್ಯಕ್ಷ ಕೆ.ಬಿ. ಮುದ್ದಪ್ಪ, ಬಮುಲ್ ಅಧ್ಯಕ್ಷ ಅಪ್ಪಯ್ಯಣ್ಣ, ಟಿ.ಎ.ಪಿ.ಎಂ.ಸಿ. ಅಧ್ಯಕ್ಷ ಅಶ್ವಥ್ ನಾರಾಯಣ್, ಕುಂಟನಹಳ್ಳಿ ಮಂಜುನಾಥ್, ಪುಟ್ಟಬಸವರಾಜು, ಒಬದೇನಹಳ್ಳಿ ಮುನಿಯಪ್ಪ, ಎಚ್. ನಾರಾಯಣಪ್ಪ ಮತ್ತಿತರರು ಹಾಜರಿದ್ದರು.
Comments