ಎಚ್.ಡಿ. ಕುಮಾರಸ್ವಾಮಿಗೆ ಹುಟ್ಟುಹಬ್ಬಕ್ಕೆ ಶುಭ ಕೋರಿದ ಕಿಚ್ಚ ಸುದೀಪ್
ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್ ಶುಭ ಕೋರಿರುವುದು ವಿಶೇಷ ಎನಿಸಿದೆ. ‘ಹ್ಯಾಪಿ ಬರ್ತ್ ಡೇ ಕುಮಾರಣ್ಣ. ನಿಮಗೆ ಆರೋಗ್ಯ ಆಯಸ್ಸು ಜಾಸ್ತಿ ಜಾಸ್ತಿ ಸಿಗಲಿ’ ಎಂದು ವಿಡಿಯೋ ಮೂಲಕ ಸುದೀಪ್ ಶುಭಾಶಯ ತಿಳಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಇಂದು 59 ನೇ ಹುಟ್ಟುಹಬ್ಬದ ಸಂಭ್ರಮ. ಜೆ.ಪಿ.ನಗರದ ನಿವಾಸದಲ್ಲಿ ಅಭಿಮಾನಿಗಳ ಜತೆ ಕೇಕ್ ಕತ್ತರಿಸಿ ತಮ್ಮ ಹುಟ್ಟು ಹಬ್ಬವನ್ನು ಎಚ್‌ಡಿಕೆ ಆಚರಿಸಿಕೊಂಡರು. ಎಚ್‌ಡಿಕೆ ಪುತ್ರ ನಿಖಿಲ್, ಜೆಡಿಎಸ್ ಶಾಸಕರು ಮತ್ತು ಪರಿಷತ್ ಸದಸ್ಯರು, ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿ ಕುಮಾರಸ್ವಾಮಿ ಅವರಿಗೆ ಶುಭ ಕೋರಿದರು.
ನಂತರ ಮಾತನಾಡಿದ ಕುಮಾರಸ್ವಾಮಿ, ಕಾರ್ಯಕರ್ತರ ಜತೆ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು ಸಂತಸ ತಂದಿದೆ ಎಂದು ಹೇಳಿದರು.
Comments