ನಿಖಿಲ್ ರಾಜಕೀಯದ ಗೊಂದಲಕ್ಕೆ ತೆರೆ ಎಳೆದ ಎಚ್ ಡಿಕೆ
ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಬರುವುದಿಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಜೆ.ಪಿ. ಭವನದಲ್ಲಿ ನಡೆದ ತಮ್ಮ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಯಾವುದೇ ಕಾರಣಕ್ಕೂ ನಿಖಿಲ್ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಆದರೆ, ಪಕ್ಷದ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾನೆ’ ಎಂದು ಹೇಳಿದರು. ಈ ಮೂಲಕ ನಿಖಿಲ್ ರಾಜಕೀಯ ಪ್ರವೇಶದ ಬಗ್ಗೆ ಮೂಡಿದ್ದ ಗೊಂದಲಗಳಿಗೆ ತೆರೆ ಎಳೆದರು.
ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳೇ ನಮ್ಮ ಶಕ್ತಿ. ಈಗಾಗಲೇ ಪಕ್ಷ ಸಂಘಟನೆಗೆ ಚಾಲನೆ ನೀಡಿದ್ದು, ಪಕ್ಷವನ್ನು ಅಧಿಕಾರಕ್ಕೆ ತರುವ ವರೆಗೂ ವಿರಮಿಸುವ ಪ್ರಶ್ನೆಯೇ ಇಲ್ಲ. ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜೀವನವನ್ನು ಮುಡಿಪಾಗಿ ಇಡುತ್ತೇನೆ ಎಂದು ತಿಳಿಸಿದರು.
Comments