ಮುಂದಿನ ಚುನಾವಣೆಯಲ್ಲಿ ತಾವು ಗೆದ್ದೇ ಗೆಲ್ಲುತ್ತೇವೆ : ಡಿಕೆ ಶಿವಕುಮಾರ್

18 Dec 2017 1:45 PM |
2016 Report

ಗುಜರಾತ್‍ನ ರಾಜಕಾರಣವೇ ಬೇರೆ, ಕರ್ನಾಟಕದ ರಾಜಕಾರಣವೇ ಬೇರೆ. ಇಲ್ಲಿ ಯಾವುದೇ ಕ್ಷಣದಲ್ಲೂ ಚುನಾವಣೆ ನಡೆದರೂ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರಲಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್‍ನ ಫಲಿತಾಂಶ ಕರ್ನಾಟಕದ ರಾಜಕಾರಣದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಹೇಳಿದರು.

ನಮ್ಮ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಬಿಜೆಪಿಯವರ ಹಿಂದಿನ ಆಡಳಿತ ಅನುಭವ ಜನರಿಗೆ ಇರುವುದರಿಂದ ಇಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವೇ ಇಲ್ಲ. ಕಾಂಗ್ರೆಸ್ ಸ್ವಚ್ಛ ಆಡಳಿತ ನೀಡಿದೆ. ಜನ ಅದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು. ಮುಂದಿನ ಚುನಾವಣೆಯಲ್ಲಿ ತಾವು ಗೆದ್ದೇ ಗೆಲ್ಲುತ್ತೇವೆ, ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Edited By

dks fans

Reported By

dks fans

Comments