ಬಿಜೆಪಿ ಬಣ್ಣ ಬಯಲು ಮಾಡಲು ನಮ್ಮ ಜಾಗೃತಿ ಯಾತ್ರೆ ಶುರು : ಎಚ್ ಡಿಕೆ

23 Dec 2017 12:58 PM |
1042 Report

ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿರುದ್ಧದ ನಮ್ಮ ಜಾಗೃತಿ ಯಾತ್ರೆ ಜ.5ರಂದು ಬೆಳಗಾವಿಯಿಂದ ಪ್ರಾರಂಭಿಸಲಾಗುವುದು. ಸುಮಾರು 25ದಿನಗಳ ಕಾಲ ಉತ್ತರ ಕರ್ನಾಟಕದ ಪ್ರತಿ ತಾಲೂಕು ಹಾಗೂ ಜಿಲ್ಲೆಯಲ್ಲಿ ಸಮಾವೇಶ ನಡೆಸಿ ಬಿಜೆಪಿಯ ಬಣ್ಣವನ್ನು ಬಯಲು ಮಾಡಲಾಗುವುದು ಎಂದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಬಿಜೆಪಿ ನಡೆಸುತ್ತಿರುವ ರಾಜಕೀಯ ನಾಟಕವನ್ನು ಉತ್ತರ ಕರ್ನಾಟಕದ ಜನತೆಗೆ ತಿಳಿಸುವ ನಿಟ್ಟಿನಲ್ಲಿ ಜ.5ರಿಂದ ಉತ್ತರ ಕರ್ನಾಟಕದ ಪ್ರವಾಸ ಮಾಡಲಿದ್ದೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬಿಜೆಪಿ ಮಾಡುತ್ತಿರುವ ರಾಜಕೀಯ ಅವಾಂತರಗಳಿಂದಾಗಿ ಆ ಪಕ್ಷದ ಕಾರ್ಯಕರ್ತೆಯರೇ ಜೈಲಿನಲ್ಲಿ ಕೊಳೆಯುವಂತಾಗಿದೆ. ಇಂತವರು ರಾಜ್ಯದ ಜನತೆಗೆ ಏನು ಮಾಡಲು ಸಾಧ್ಯ. ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆ ಬಿಜೆಪಿಯ ಬಣ್ಣದ ಮಾತುಗಳಿಗೆ ಮರುಳಾಗಬಾರದು. ಈ ಹಿನ್ನೆಲೆಯಲ್ಲಿ ಬಿಜೆಪಿಯ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ಸಮಾವೇಶ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

Edited By

hdk fans

Reported By

hdk fans

Comments