ಭಾರತದ ಮೊಟ್ಟ ಮೊದಲ ಶಿಕ್ಷಕಿ, ಆಧುನಿಕ ಶಿಕ್ಷಣದ ತಾಯಿ, ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಸಾವಿತ್ರಿಬಾಯಿ ಫುಲೆ (೧೮೩೧-೧೮೯೭) ಜನ್ಮದಿನ ಇಂದು

03 Jan 2018 7:07 AM |
2644 Report

ಸಾವಿತ್ರಿಬಾಯಿ ಫುಲೆ ೧೮೩೧ ಜನವರಿ ೩ ರಂದು ಮಹಾರಾಷ್ಟ್ರದ ಸತಾರಜಿಲ್ಲೆಯ 'ನೈಗಾಂನ್'ನಲ್ಲಿ ಹುಟ್ಟಿದರು. ಬಾಲ್ಯ ವಿವಾಹ ರೂಢಿಯಲ್ಲಿದ್ದ ಕಾಲದಲ್ಲಿ ಸಾವಿತ್ರಿಬಾಯಿ ಫುಲೆ ಮದುವೆಯಾದಾಗ ಅವರಿಗೆ ೮ ವರ್ಷ ವಯಸ್ಸು, ಜ್ಯೋತಿಬಾಫುಲೆ ಅವರಿಗೆ ೧೩ ವರ್ಷ ವಯಸ್ಸಾಗಿತ್ತು. ಸಾವಿತ್ರಿಬಾಯಿ ಅವರಿಗೆ ಮನೆಯೇ ಮೊದಲ ಪಾಠಶಾಲೆ, ಪತಿ ಜ್ಯೋತಿಬಾ ಅವರೇ ಗುರುಗಳು. ೧೮೪೭ರಲ್ಲಿ ಸಾವಿತ್ರಿಬಾಯಿ ಶ್ರೀಮತಿ ಮಿಚಲ್ ಅವರ ನಾರ್ಮಲ್ ಶಾಲೆಯಲ್ಲಿ ಶಿಕ್ಷಕಿಯ ತರಭೇತಿ ಪಡೆದರು. ಆಗ ಅವರಿಗೆ ೧೭ ವರ್ಷ, ಹೀಗಾಗಿ ಮಹಾರಾಷ್ಟ್ರದಲ್ಲಿ ತರಭೇತಾದ ಮೊದಲ ಶಿಕ್ಷಕಿಯಾದರು. ಆ ಕಾಲದಲ್ಲಿ ಹಿಂದೂ ಸ್ರ್ರೀಯೊಬ್ಬಳು ಶಿಕ್ಷಕಿಯಾಗುವುದು ಧರ್ಮಕ್ಕೂ, ಸಮಾಜಕ್ಕೂ ದ್ರೋಹ ಬಗೆದಂತೆ. ಅವರು ಪಾಠಶಾಲೆಗೆ ಹೋರಟಾಗ ಕೇಕೇ ಹಾಕಿ ನಗುತ್ತಿದ್ದರು, ಕೆಸರು, ಸಗಣಿ ಎರಚಿ, ಕಲ್ಲನ್ನೂ ತೂರುತ್ತಿದ್ದರು.

ಇಂದು ಭಾರತದ ಮಹಿಳೆಯರ ಸಮಾಜದ ಎಲ್ಲಾ ಕ್ಷೇತ್ರದಲ್ಲಿ ಸಮಾನತೆಯ ಹಕ್ಕಿಗೆ ಕಾರಣರಾದವರು ಮಾತೆ ಸಾವಿತ್ರಿ ಬಾಪುಲೆ. ಇವರು ಸಮಾಜದ ಅನಿಷ್ಟ ಪದ್ದತಿಗಳಾದ ಬಾಲ್ಯ ವಿವಾಹ, ಸತಿಸಹಗಮನ ಪದ್ದತಿ, ಕೇಶ ಮುಂಡನೆ ವಿರುದ್ದ ಹೋರಾಟ ಮಾಡಿ, ಮಹಿಳೆಯರಿಗೋಸ್ಕರ ಪ್ರ ಪ್ರಥಮವಾಗಿ ಶಾಲೆಗಳು, ಅಬಲಾಶ್ರಮ ಸ್ಥಾಪನೆ ಮಾಡಿದ ಕೀತಿ೯ ಇವರಿಗೆ ಸಲ್ಲುತ್ತದೆ.  ೧೮೬೦ರ ದಶಕದಲ್ಲಿ ವಿಧವೆಯರ ತಲೆಬೋಳಿಸುವ ಪದ್ಧತಿಯನ್ನು ಪ್ರಬಲವಾಗಿ ವಿರೋಧಿಸಿದರು. ವಿಧವೆಯರಿಗೆ, ವಿವಾಹಬಾಹಿರವಾಗಿ ಗರ್ಭಿಣಿಯರಾಗುವ ಮಹಿಳೆಯರಿಗಾಗಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಿದರು.  ವಿವಾಹಬಾಹಿರ ಸಂಬಂಧದಿಂದ ಹುಟ್ಟಿದ ಮಕ್ಕಳಿಗಾಗಿ ಭಿನ್ನವಾದ ಶಿಶುಕೇಂದ್ರಗಳನ್ನು ಸ್ಥಾಪಿಸಿದರು.  ಸಾಮಾಜಿಕ ಸಂಘಟನೆಗಳ ಮೂಲಕ ನೂರಾರು ಮಹಿಳೆಯರ ಮತ್ತು ಮಕ್ಕಳ ಬದುಕಿಗೊಂದು ನೆಲೆ ಕೊಟ್ಟರು.

ಈ ಎಲ್ಲಾ ಸಾಧನೆಗಳನ್ನು ಪರಿಗಣಿಸಿ,‌ ಬ್ರಿಟಿಷ್ ಸರಕಾರ ಇವರಿಗೆ "ಇಂಡಿಯಾಸ್ ಫಸ್ಟ್ ಲೇಡಿ ಟೀಚರ್" ಎಂದು ಬಿರುದು ಕೊಟ್ಟಿದೆ.

ಮಾಹಿತಿ:  ಬ್ರಜ್ ರಂಜನ್ ಮಣಿ ಪಮೇಲ ಸರ್ದಾರ್

Edited By

Ramesh

Reported By

Ramesh

Comments