ಹಿರಿಯ ನಾಗರಿಕರ ಸಂವಾದದಲ್ಲಿ ಎಚ್ ಡಿಕೆ ಹೇಳಿದ್ದೇನು?

03 Jan 2018 3:48 PM |
1587 Report

ಹಿರಿಯ ನಾಗರಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ತಪಾಸಣೆಗೆ ಅವಕಾಶ. ಬಸ್, ಮೆಟ್ರೋ ರೈಲಿನಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅಗತ್ಯ ವ್ಯವಸ್ಥೆ ಮಾಡಲಾಗುತ್ತದೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ಶ್ರೀ ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್, ಬೆಂಗಳೂರು ನಗರ ಜೆಡಿಎಸ್ ಘಟಕದ ವತಿಯಿಂದ 'ಬೆಂಗಳೂರು ನಗರದ ಹಿರಿಯ ನಾಗರಿಕರೊಂದಿಗೆ ಸಂವಾದ' ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಂಡಿದ್ದರು.

ಹಿರಿಯ ನಾಗರಿಕರ ಸಮಸ್ಯೆ ಆಲಿಸಿದ ಎಚ್.ಡಿ.ಕುಮಾರಸ್ವಾಮಿ, ಪಕ್ಷ ಅಧಿಕಾರಕ್ಕೆ ಬಂದರೆ ಒದಗಿಸುವ ಸೌಲಭ್ಯಗಳ ಕುರಿತು ಮಾಹಿತಿ ಹಂಚಿಕೊಂಡರು.ಸೇವೆಯಿಂದ ನಿವೃತ್ತರಾದ ನಿಮ್ಮ ಬಳಿ ಅಪಾರವಾದ ಅನುಭವವಿದೆ. ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದರೆ ನಿಮ್ಮ ಅನುಭವಗಳನ್ನು ಬಳಸಿಕೊಂಡು ಆಡಳಿತ ಮಾಡುತ್ತೇನೆ. 60 ವರ್ಷಕ್ಕೆ ನಿಮ್ಮನ್ನು ಮನೆಗೆ ಕಳಿಸದೇ ಕೆಲಸ ನೀಡುತ್ತೇನೆ' ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.

Edited By

Shruthi G

Reported By

hdk fans

Comments