ಜೆಡಿಎಸ್ ಮೈತ್ರಿಯ ಬಗ್ಗೆ ಎಚ್ ಡಿಕೆ ಹೊಸ ಬಾಂಬ್
ಒಂದೊಮ್ಮೆ ಎರಡೂ ಪಕ್ಷಗಳೂ ಬಹುಮತ ಪಡೆಯಲು ವಿಫಲವಾದರೆ, ಅಂತಂತ್ರ ವಿಧಾನಸಭೆಯೆದುರು ಕಿಂಗ್ ಮೇಕರ್ ಆಗಿ ನಿಲ್ಲುವುದು ಜೆಡಿಎಸ್! ಆದರೆ ನಾವು ಬಿಜೆಪಿಯೊಂದಿಗಾಗಲಿ, ಕಾಂಗ್ರೆಸ್ ನೊಂದಿಗಾಗಲಿ ಮೈತ್ರಿ ಮಾಡಿಕೊಳ್ಳಲು ಇಷ್ಟಪಡೋಲ್ಲ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಜೆಡಿಎಸ್ ಮತ್ತು ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಸುಳ್ಳು ಸುದ್ದಿಯನ್ನು ಸ್ವತಃ ಕಾಂಗ್ರೆಸ್ ಹಬ್ಬಿಸುತ್ತಿದೆ. ಮುಸ್ಲಿಂ ಓಟುಗಳನ್ನು ಪಡೆಯಲು ಕಾಂಗ್ರೆಸ್ ಮಾಡುತ್ತಿರುವ ಹುನ್ನಾರ ಇದು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸಭೆ ಚುನಾವಣೆಯ ಪ್ರಚಾರಕ್ಕಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸದಲ್ಲಿರುವ ಕುಮಾರಸ್ವಾಮಿ, ಬೆಳಗಾವಿಯಲ್ಲಿ ಈ ವಿಷಯ ತಿಳಿಸಿದ್ದಾರೆ.ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಲ್ಲೂ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದು, ಉತ್ತರ ಕರ್ನಾಟಕ ಭಾಗದಲ್ಲೇ ನಾವು ಕನಿಷ್ಠ 45 ಸೀಟುಗಳನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನು ಎಚ್.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದರು.
Comments