ಜೆಡಿಎಸ್ ನಿಂದ ಅಮಾನತುಗೊಂಡ ಶಾಸಕರಿಗೆ ಟಿಕೆಟ್‌‌ ಸಿಗಲಿದೆ : ಡಿಕೆಶಿ

09 Jan 2018 5:50 PM |
2096 Report

ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಅಖಂಡ ಶ್ರೀನಿವಾಸಮೂರ್ತಿ ನಮ್ಮ ಸ್ನೇಹಿತರು. ರಾಜ್ಯಸಭೆ ಚುನಾವಣೆಯಲ್ಲಿ ನಮಗೆ ಸಹಕರಿಸಿದವರು. ಚುನಾವಣೆ ಹತ್ತಿರ ಬರುತ್ತಿದೆ. ಹಾಗಾಗಿ ಎಲ್ಲಾ ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದೇನೆ. ಅದರಂತೆಯೇ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ಜೊತೆಗೆ ಶ್ರೀನಿವಾಸಮೂರ್ತಿ ಅವರನ್ನು ಭೇಟಿಯಾಗಿದ್ದೇನೆ ಎಂದರು.

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಶಾಸಕರಿಗೆ ಟಿಕೆಟ್‌ ನೀಡುವ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಪರೋಕ್ಷವಾಗಿ ಅಮಾನತು ಶಾಸಕರಿಗೆ ಟಿಕೆಟ್‌‌ ಸಿಗಲಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸುಳಿವು ನೀಡಿದ್ದಾರೆ. ಇಂದು ಜೆಡಿಎಸ್‌ ಬಂಡಾಯ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಪುಲಿಕೇಶಿನಗರ ನಿವಾಸಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿದರು. ಈ ರಾಜಕೀಯ ಭೇಟಿ ವೇಳೆ ಶಾಸಕ ಜಮೀರ್ ಅಹ್ಮದ್ ಡಿಕೆಶಿಗೆ ಸಾಥ್ ನೀಡಿದರು. ಶ್ರೀನಿವಾಸಮೂರ್ತಿ ಭೇಟಿ ಬಳಿಕ ಪಕ್ಷದಲ್ಲಿ ಟಿಕೆಟ್ ಹಂಚಿಕೆ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ. ಜೆಡಿಎಸ್ ಅಮಾನತು ಶಾಸಕರು ಸೇರಿದಂತೆ ಪಕ್ಷದ ಟಿಕೆಟ್ ಹಂಚಿಕೆಯನ್ನು ಹೈಕಾಂಂಡ್ ನಿರ್ಧರಿಸಲಿದೆ. ಅಂತಿಮ ತೀರ್ಮಾನ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದರು.

Edited By

dks fans

Reported By

dks fans

Comments