ದೊಡ್ಡಬಳ್ಳಾಪುರ ಕ್ಷೇತ್ರಕ್ಕೆ ಜೆಡಿಎಸ್ ನಿಂದ ಅಬ್ಯರ್ಥಿ ಘೋಷಣೆ, ಮುನೇಗೌಡರವರಿಗೆ ಟಿಕೆಟ್...ಕುಮಾರಸ್ವಾಮಿ

13 Jan 2018 9:46 AM |
689 Report

ದೇವನಹಳ್ಳಿಯ ಚಪ್ಪರದಕಲ್ಲಿನಬಳಿ ಆಯೋಜಿಸಲಾಗಿದ್ದ ಸಮಾವೇಶ ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು, ಅಭ್ಯರ್ಥಿ ಘೋಷಣೆ ಮಾಡುವ ಮೂಲಕ ಕ್ಷೇತ್ರದಲ್ಲಿ ಚುನಾವಣೆಯ ಕಾವನ್ನು ಹೆಚ್ಚಿಸಿದ್ದಾರೆ. ಚುನಾವಣೆ ದಿನಾಂಕ ಘೋಷಣೆಗೆ ಮೊದಲೇ ಕುಮಾರಸ್ವಾಮಿ ಅಭ್ಯರ್ಥಿ ಘೋಷಿಸಿರುವುದು ಹಲವು ಲೆಕ್ಕಾಚಾರಗಳಿಗೆ ಕಾರಣವಾಗಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಟಿ.ವೆಂಕಟರಮಣಯ್ಯ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಮುನೇಗೌಡ ಅವರಿಗೆ ಟಿಕೆಟ್ ನೀಡಲಾಗುತ್ತದೆ. ಅವರನ್ನು ಗೆಲ್ಲಿಸುವ ಹೊಣೆ ನಿಮ್ಮದು' ಎಂದು ಎಚ್.ಡಿ.ಕುಮಾರಸ್ವಾಮಿ ಸಮಾವೇಷದಲ್ಲಿ ಹೇಳಿದರು.

ದೊಡ್ಡಬಳ್ಳಾಪುರ ಕ್ಷೇತ್ರ ಸದ್ಯ ಕಾಂಗ್ರೆಸ್ ವಶದಲ್ಲಿದೆ, ಟಿ.ವೆಂಕಟರಮಣಯ್ಯ 2013ರ ಚುನಾವಣೆಯಲ್ಲಿ 38,877 ಮತಗಳನ್ನು ಪಡೆದು ಜಯಗಳಿಸಿದ್ದರೆ, ಮುನೇಗೌಡ ಅವರು ಕಳೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ 37,430 ಮತಗಳನ್ನು ಪಡೆದಿದ್ದರು.  ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಸಿ.ಚನ್ನಿಗಪ್ಪ ಸ್ಪರ್ಧಿಸಿದ್ದರು 34,628 ಮತಗಳನ್ನು ಪಡೆದು ಸೋತಿದ್ದರು.

Edited By

Ramesh

Reported By

Ramesh

Comments