ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಶಾಸಕ ಟಿ. ವೆಂಕಟರಮಣಯ್ಯನವರಿಂದ ಉದ್ಘಾಟನೆ

13 Jan 2018 10:51 AM |
408 Report

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುತ್ತಾ ಕ್ರೀಡೆಗಳು ವ್ಯಕ್ತಿತ್ವ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿ ಮಾನಸಿಕ ಮತ್ತು ದೈಹಿಕ ಆರೋಗ್ಯ ಲಭಿಸುತ್ತದೆ ಎಂದು ಹೇಳಿದರು. ಸರ್ಕಾರಿ ನೌಕರರು ದಿನದಲ್ಲಿ ಅರ್ಧ ಘಂಟೆಯಾದರೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಮಾನಸಿಕ ಹಾಗೂ ದೈಹಿಕ ಆರೋಗ್ಯ ಹೆಚ್ಚಿಸಿಕೊಳ್ಳುವಂತೆ ನೌಕರರ ಸಂಘದ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷ ಶಿವರಾಜ್ ಸಲಹೆ ನೀಡಿದರು. . ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಶ್ರೀವತ್ಸ, ತಹಸೀಲ್ದಾರ್ ರಾಜೀವಲೋಚನ್, ಗ್ರೇಡ್ ೨ ತಹಸೀಲ್ದಾರ್ ರಾಮಲಿಂಗಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ರಂಗಪ್ಪ, ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದಲಿಂಗಯ್ಯ, ಕಾರ್ಯದರ್ಶಿ ಬಸವಲಿಂಗಪ್ಪ, ಬರಗೂರು ನರಸಿಂಹಮೂರ್ತಿ ಭಾಗವಹಿಸಿದ್ದರು.

Edited By

Ramesh

Reported By

Ramesh

Comments