ಕರ್ನಾಟಕ ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದ ದಿನಾಂಕ ಬದಲು. ಫೆ.4ರಂದು ಸಮಾರಂಭ ನಿಗದಿ.




ರಾಜ್ಯ ಬಿಜೆಪಿ ಘಟಕ ಜನವರಿ 28ರಂದು ಪರಿವರ್ತಯಾ ಯಾತ್ರೆ ಸಮಾರೋಪ ಸಮಾರಂಭವನ್ನು ನಿಗದಿ ಮಾಡಿತ್ತು. ಆದರೆ, ಶುಕ್ರವಾರ ದಿನಾಂಕವನ್ನು ಬದಲಾವಣೆ ಮಾಡಲಾಗಿದ್ದು ಫೆ.4ರ ಭಾನುವಾರ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 2017ರ ನವೆಂಬರ್ 2ರಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಪರಿವರ್ತನಾ ಯಾತ್ರೆಗೆ ಚಾಲನೆ ಕೊಟ್ಟಿದ್ದರು. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ನಡೆಸಿ, ಚುನಾವಣಾ ಪ್ರಚಾರ ನಡೆಸಲಾಗಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಈಗಾಗಲೇ ಮೂರು ಬಾರಿ ರಾಜ್ಯಕ್ಕೆ ಬಂದು ಹೋಗಿದ್ದು, ಚುನಾವಣಾ ಸಿದ್ಧತೆಗಳ ಕುರಿತು ಸರಣಿ ಸಭೆ ನಡೆಸಿದ್ದಾರೆ. ಜನವರಿ 27ರಂದು ಅವರು ಪುನಃ ರಾಜ್ಯಕ್ಕೆ ಆಗಮಿಸಲಿದ್ದಾರೆ. ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ಫೆ.4ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಅಂದು ಮೋದಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದು, ಅಮಿತ್ ಶಾ ಸಹ ಉಪಸ್ಥಿತರಿರುತ್ತಾರೆ.
Comments