ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿದ ಸದಾನಂದಗೌಡರಿಗೆ ತಿರುಗೇಟು ನೀಡಿದ ಕುಮಾರಣ್ಣ
ಜೆಪಿ ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ಬಗ್ಗೆ ಸದಾನಂದಗೌಡರು ಲಘುವಾಗಿ ಮಾತನಾಡುವುದು ಬೇಡ. ಅವರ ಹೋರಾಟ ಎಂಥದ್ದು ಎಂಬುದು ಗೊತ್ತಿದೆ. ಕೆಎಂಎಫ್ ನಿರ್ದೇಶಕ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದವರು ಮುಖ್ಯಮಂತ್ರಿಯಾಗಿದ್ದು ಹೇಗೆ ಎಂಬುದು ಅವರು ನೆನಪಿಸಿಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಎರಡಂಕಿ ದಾಟುವುದಿಲ್ಲವೆಂದು ಹೇಳಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು, ಬಿಜೆಪಿಯಲ್ಲಿ ಎಷ್ಟು ಹೋರಾಟ ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಯಡಿಯೂರಪ್ಪ ಅವರ ಭ್ರಷ್ಟಾಚಾರದ ಬಗ್ಗೆ ದಾಖಲೆ ಸಮೇತ ನಾನು ಬಿಡುಗಡೆ ಮಾಡಿದ್ದರಿಂದಲೇ ಸದಾನಂದ ಗೌಡರಿಗೆ ಮುಖ್ಯಮಂತ್ರಿಯಾಗುವ ಅವಕಾಶ ದೊರೆಯಿತು. ಅವರು ಮುಖ್ಯಮಂತ್ರಿಯಾಗಲು ನಮ್ಮ ಪಾತ್ರ ಇದೆ ಎಂಬುದನ್ನು ಮರೆಯಬಾರದು ಎಂದು ತಿಳಿಸಿದ್ದಾರೆ.
Comments