ಜೆಡಿಎಸ್ ಸೇರಲು ಬಿಜೆಪಿ-ಕಾಂಗ್ರೆಸ್ ನ ಹಲವು ಶಾಸಕರು ಸಂಪರ್ಕದಲ್ಲಿದ್ದಾರೆ: ಎಚ್ ಡಿಕೆ
ಬೀದರ: ರಾಯಚೂರು ಜಿಲ್ಲೆಯ ಇಬ್ಬರು ಜೆಡಿಎಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿರುವ ವಿಷಯದಲ್ಲಿ ಆಶ್ಚರ್ಯ ಇಲ್ಲ. 2 ವರ್ಷಗಳ ಹಿಂದೆಯೇ ಇವರು ಬಿಜೆಪಿ ಬಾಗಿಲು ತಟ್ಟಿದ್ದಾರೆ. ಅವರನ್ನು ಪಕ್ಷ ದಿಂದ ತೆಗೆದು ಹಾಕುವ ಬದಲು ಇದೀಗ ಅವರೇ ಪಕ್ಷ ಬಿಟ್ಟು ಹೋಗಿರುವುದರಿಂದ ಯಾವುದೇ ನಷ್ಟ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರಿನ 2 ಕ್ಷೇತ್ರದಲ್ಲಿ ಬೇಕಾದಷ್ಟು ಅರ್ಹ ಅಭ್ಯರ್ಥಿಗಳಿದ್ದಾರೆ. ಜೆಡಿಎಸ್ ಸೇರಲು ಬಿಜೆಪಿ ಮತ್ತು ಕಾಂಗ್ರೆಸ್‌ನ ಹಲವು ಶಾಸಕರು ಸಂಪರ್ಕದಲ್ಲಿದ್ದಾರೆ ಎಂದರು.
Comments