ಬಂಡಾಯ ಶಾಸಕರಿಗೆ ಸೆಡ್ಡು ಹೊಡೆಯಲು ಜೆಡಿಎಸ್ ಮಾಸ್ಟರ್ ಪ್ಲಾನ್..!!
ಕುಮಾರಪರ್ವ ಕಾರ್ಯಕ್ರಮದ ಮೂಲಕ ಮತ್ತೆ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡುವುದು ಮತ್ತು ಜೆಡಿಎಸ್ ಬಂಡಾಯ ಶಾಸಕ ಚೆಲುವರಾಯಸ್ವಾಮಿ ಸೇರಿದಂತೆ ಇತರೆ ನಾಯಕರಿಗೆ ಸೆಡ್ಡು ಹೊಡೆಯುವ ಯತ್ನವೂ ಪಕ್ಷದ ಕಡೆಯಿಂದ ನಡೆಯುತ್ತಿದೆ.
ಮಂಡ್ಯದ ಕಾಳಿಕಾಂಭ ದೇವಸ್ಥಾನದ ಬಳಿ ಮಂಡ್ಯ ವಿಧಾನಸಭಾ ವ್ಯಾಪ್ತಿಯಲ್ಲಿ ಕುಮಾರಪರ್ವ ಕಾರ್ಯಕ್ರಮದ ಅಂಗವಾಗಿ ಬೈಕ್ ಜಾಥಾ ನಡೆಸಲಾಯಿತು. ದೇವೇಗೌಡರ ಪುತ್ರ ಡಾ.ಎಚ್.ಡಿ. ರಮೇಶ್ ಅವರು ಜಾಥಾಕ್ಕೆ ಚಾಲನೆ ನೀಡಿದರು. ಇದುವರೆಗೆ ರಾಜಕೀಯ ವೇದಿಕೆಗಳಲ್ಲಿ ಕಾಣಿಸಿಕೊಳ್ಳದೆ ರಮೇಶ್ ಇದೀಗ ಕಾಣಿಸಿಕೊಂಡಿದ್ದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.ಈ ಬಾರಿ ಜೆಡಿಎಸ್ ಪಕ್ಷವನ್ನು ಹೇಗಾದರೂ ಮಾಡಿ ಅಧಿಕಾರಕ್ಕೆ ತರಲೇಬೇಕು ಎಂದು ದೇವೇಗೌಡರು ಹಠ ತೊಟ್ಟಿದ್ದಾರೆ. ಆದ್ದರಿಂದ, ದೇವೇಗೌಡರು, ಎಚ್.ಡಿ.ರೇವಣ್ಣ, ಅನಿತಾ ಕುಮಾರಸ್ವಾಮಿ, ಭವಾನಿ ರೇವಣ್ಣ, ಪ್ರಜ್ವಲ್ ರೇವಣ್ಣ ಎಲ್ಲರೂ ಚುನಾವಣಾ ಕಣಕ್ಕಿಳಿದಿದ್ದಾರೆ.ಹಾಗೆ ನೋಡಿದರೆ ಮಂಡ್ಯ ಜಿಲ್ಲೆ ಜೆಡಿಎಸ್‍ನ ಭದ್ರಕೋಟೆ ಎಂಬುದರಲ್ಲಿ ಎರಡು ಮಾತಿಲ್ಲ. ಜತೆಗೆ ಎರಡು ಪಕ್ಷಗಳು ಕೂಡ ಮಂಡ್ಯದಲ್ಲಿ ಗೆಲುವು ಸಾಧಿಸಲೇ ಬೇಕೆಂದು ಹೊರಟಿವೆ. ಮಂಡ್ಯದತ್ತ ಹೆಚ್ಚಿನ ಒಲವು ತೋರುತ್ತಿರುವ ಜೆಡಿಎಸ್‍ನ ನಾಯಕರು ಗೆಲುವಿಗಾಗಿ ತಂತ್ರಗಳನ್ನು ರೂಪಿಸುತ್ತಿದ್ದಾರೆ.
Comments