ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರವಾಗಿ ಎಚ್ ಡಿಡಿ ಮತ್ತು ಎಚ್ ಡಿ ರೇವಣ್ಣ ಆಕ್ರೋಶ
ರೋಹಿಣಿ ಸಿಂಧೂರಿ ವರ್ಗಾವಣೆಗೆ ದೇವೇಗೌಡರ ಆಕ್ರೋಶ . ಮಹಾಮಸ್ತಾಭಿಷೇಕದ ಹಣ ಹೊಡೆಯಲು ಡಿಸಿ ಬಿಡಲಿಲ್ಲ. ಇದಕ್ಕೆ ಕೋಪ ದಿಂದ ಸರ್ಕಾರ ವರ್ಗಾವಣೆ ಮಾಡಿದೆ. ಅಲ್ಲಿನ ಉಸ್ತುವಾರಿ ಸಚಿವರು ಏನ್ ಮಾಡ್ತಿದಾರೆ ಗೊತ್ತು. ಇಂಥ ಪವಿತ್ರ ಕಾರ್ಯದಲ್ಲೂ ಪರ್ಸೆಂಟೇಜ್ ಬೇಕಾ ? ಎಂದು ದೇವೇಗೌಡರು ಸರ್ಕಾರಕ್ಕೆ ಪ್ರಶ್ನೆ ಮಾಡಿದರು.
ಇತ್ತೀಚೆಗೆ ಸಿಎಂ, ಹಾಸನ ಜಿಲ್ಲಾ ಪ್ರವಾಸ ಕೈಗೊಂಡಿದ್ದಾಗಿ ರೋಹಿಣಿ ಸಿಂಧೂರಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದರು. ಹಾಸನದ ಡಿಸಿ ರೋಹಿಣಿ ಸಿಂಧೂರಿ, ಜೆಡಿಎಸ್ ಪರವಾಗಿ ವರ್ತಿಸುತ್ತಿದ್ದಾರೆ. ಜೆಡಿಎಸ್ ನಾಯಕರಿಗೆ ಮಣೆ ಹಾಕ್ತಾರೆ. ಕಾಂಗ್ರೆಸ್ ಕಾರ್ಯಕರ್ತರನ್ನ ಕಡೆಗಣಿಸುತ್ತಿದ್ದಾರೆ ಎಂದು ದೂರಿದ್ದರು. ಈ ಮಧ್ಯೆ, ಡಿಸಿ ರೋಹಿಣಿ ಸಿಂಧೂರಿಯವರನ್ನ ಸರ್ಕಿಟ್ ಹೌಸ್ಗೆ ಕರೆಸಿಕೊಂಡ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ಪರವಾಗಿ ಕೆಲಸ ಮಾಡುತ್ತಿದ್ದಾರಂತೆ. ಇದೆಲ್ಲ ನಡೆಯಲ್ಲ ಎಂದು ಎಚ್ಚರಿಕೆ ನೀಡಿದ್ದರು. 12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕದ ಅವಧಿಯಲ್ಲಿ ಜಿಲ್ಲಾಧಿಕಾರಿ ವರ್ಗಾವಣೆ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಎಚ್ ಡಿ ರೇವಣ್ಣ ರೋಹಿಣಿಯವರನ್ನು ಉದ್ದೇಶ ಪೂರ್ವಕವಾಗಿ ವರ್ಗಾವಣೆ ಮಾಡಲಾಗಿದೆ. ರೋಹಿಣಿ ಸಿಂಧೂರಿ ವರ್ಗಾವಣೆಗೆ ನಮ್ಮ ವಿರೋಧವಿದೆ. ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ ನಿರ್ಧಾರ. ವರ್ಗಾವಣೆ ವಿಚಾರವಾಗಿ ಎ. ಮಂಜು ಕೈವಾಡವಿದೆ ಎಬುದು ಎಚ್ ಡಿ ರೇವಣ್ಣ ಪ್ರತಿಕ್ರಿಯಿಸಿದರು.
Comments