ಕ್ಯಾಮೇನಹಳ್ಳಿ ಭ್ರಹ್ಮ ರಥೋತ್ಸವ ಸಂಪನ್ನ
ಕೊರಟಗೆರೆ( ಜ.24):- ಇತಿಹಾಸ ಪ್ರಸಿದ್ದ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಕಾರ್ಯಕ್ರಮ ಬುಧವಾರ ಸಂಪನ್ನವಾಯಿತು, ನೆರೆ ರಾಜ್ಯಗಳಿಂದಲೂ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಮೈಲಿಗೆ ರಥೋತ್ಸವ, ಹೂವಿನ ಪಲ್ಲಕ್ಕಿ, ನಾಟಕ ಪ್ರದರ್ಶನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ರಥೋತ್ಸವ ಕಾರ್ಯಕ್ರಮದ ಲಕ್ಷಾಂತರ ಭಕ್ತರು ಪಾಲ್ಗೋಂಡು ಆಂಜನೇಯ ಸ್ವಾಮಿಯ ದರ್ಶನ ಪಡೆದರು.
ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿಯ ಬ್ರಹ್ಮ ರಥೋತ್ಸವ ಸಂಪನ್ನ
ಕೊರಟಗೆರೆ( ಜ.24):- ಇತಿಹಾಸ ಪ್ರಸಿದ್ದ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಕಾರ್ಯಕ್ರಮ ಬುಧವಾರ ಸಂಪನ್ನವಾಯಿತು, ನೆರೆ ರಾಜ್ಯಗಳಿಂದಲೂ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
ಮೈಲಿಗೆ ರಥೋತ್ಸವ, ಹೂವಿನ ಪಲ್ಲಕ್ಕಿ, ನಾಟಕ ಪ್ರದರ್ಶನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ರಥೋತ್ಸವ ಕಾರ್ಯಕ್ರಮದ ಲಕ್ಷಾಂತರ ಭಕ್ತರು ಪಾಲ್ಗೋಂಡು ಆಂಜನೇಯ ಸ್ವಾಮಿಯ ದರ್ಶನ ಪಡೆದರು.
ಸಂಕ್ರಾಂತಿ ಹಬ್ಬದ ಮಾರನೇಯ ದಿನದಿಂದ ನಡೆದ ದನಗಳ ಜಾತ್ರೆಯಲ್ಲಿ ಪಾಲ್ಗೊಂಡಿದ್ದ 10ಸಾವಿರಕ್ಕೂ ಹೆಚ್ಚು ರಾಸುಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವನ್ನು ತಾಲೂಕು ಆಡಳಿತದ ವತಿಯಿಂದ ಉಪವಿಭಾಗಾಧಿಕಾರಿ ವೆಂಕಟೇಶಯ್ಯ, ತಹಶೀಲ್ದಾರ್ ವರಧರಾಜು ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ರೈತರಿಗೆ ನೀಡುವ ಮೂಲಕ ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಪಿ.ಆರ್.ಸುಧಾಕರ್ಲಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಚೆನ್ನಿಗಪ್ಪ, ಜೆಡಿಎಸ್ ಜಿಲ್ಲಾಪ್ರದಾನ ಕಾರ್ಯದಶರ್ಿ ಮಹಾಲಿಂಗಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಅಶ್ವತ್ಥನಾರಾಯಣ, ಸದಸ್ಯ ಜಯರಾಂ, ಮಾಜಿ ಜಿಪಂ ಸದಸ್ಯ ಕೃಷ್ಣಮೂತರ್ಿ, ತಾಪಂ ಅಧ್ಯಕ್ಷ ಕೆಂಪಣ್ಣ, ಉಪವಿಭಾಗಾಧಿಕಾರಿ ವೆಂಕಟೇಶಯ್ಯ, ತಹಶೀಲ್ದಾರ್ ವರದರಾಜು, ಕಂದಾಯ ಇಲಾಖೆಯ ಗುರುಪ್ರಸಾದ್, ಶಿವಕುಮಾರ್, ತಾ.ಪಂ ಇಓ ಎಲ್.ಮೋಹನ್ಕುಮಾರ್, ಸಿಪಿಐ ಮುನಿರಾಜು, ಪಿಸೈ ಮಂಜುನಾಥ, ಸಂತೋಷ್ ಸೇರಿದಂತೆ ಇತರರು ಇದ್ದರು.
(ಚಿತ್ರ ಇದೆ)
Comments