ಶಾಸಕರ ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಬಗ್ಗೆ ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಆನಂದ್ ಸಿಂಗ್ ಮತ್ತು ನಾಗೇಂದ್ರ ವಿರುದ್ಧ ಗಂಭೀರ ಆರೋಪಗಳಿಲ್ಲ. ಯಾವ ಪ್ರಕರಣದಲ್ಲೂ ಸಾಬೀತಾಗಿಲ್ಲ. ಅವರಿಬ್ಬರು ಹಾಗೂ ಭೀಮಾನಾಯ್ಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಹ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕೆ ಸೇರಿದವರ್ಯಾರು ಟಿಕೆಟ್ ನೀಡುವಂತೆ ಬೇಡಿಕೆ, ಷರತ್ತುಗಳನ್ನು ವಿಧಿಸಿಲ್ಲ ಎಂದರು.
ಈ ಮೊದಲು ನನ್ನ ಹಾಗೂ ಸಂತೋಷ್ ಲಾಡ್ ವಿರುದ್ಧವೂ ಆರೋಪಗಳು ಕೇಳಿಬಂದಿದ್ದವು. 3-4 ತಿಂಗಳ ಬಳಿಕ ಇಬ್ಬರಿಗೂ ಸಚಿವ ಸ್ಥಾನ ನೀಡಲಾಯಿತು ಎಂದು ಹೇಳುವ ಮೂಲಕ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಆನಂದ್ ಸಿಂಗ್ ಮತ್ತು ನಾಗೇಂದ್ರ ಕಾಂಗ್ರೆಸ್ ಸೇರ್ಪಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಹಿಂದೆ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಅವರು ಪಕ್ಷದಿಂದಲೂ ಹೊರ ಬಂದಿದ್ದರು. ಅಂಥವರನ್ನು ಬಿಜೆಪಿ ವಾಪಸ್ ಕರೆಸಿಕೊಂಡು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿದೆ. ಅಲ್ಲದೆ, ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿಯೂ ಬಿಂಬಿಸಲಾಗುತ್ತಿದೆ. ಹಾಗಾದರೆ ಬಿಜೆಪಿ, ನರೇಂದ್ರ ಮೋದಿ ಅವರ ಉದ್ದೇಶಗಳೇನು ಎಂದು ಪ್ರಶ್ನಿಸಿದರು. ಕಂಪ್ಲಿ ಶಾಸಕ ಟಿ.ಎಚ್.ಸುರೇಶ್ಬಾಬು ಕಾಂಗ್ರೆಸ್ ಸೇರಲಿದ್ದಾರೆಯೇ ಎಂಬ ಪ್ರಶ್ನೆಗೆ, ಈ ಬಗ್ಗೆ ಮಾಹಿತಿಯಿಲ್ಲ ಎಂದಷ್ಟೇ ಡಿಕೆಶಿ ಉತ್ತರಿಸಿದರು
Comments