ಪಕೋಡ ವೃತ್ತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದವತಿಯಿಂದ ತಾಲ್ಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಕೇಂದ್ರ ಸರಕಾರ ಯುವಕರಿಗೆ ಉದ್ಯೋಗ ಕಲ್ಪಿಸುವಲ್ಲಿ ವಿಫಲವಾಗಿದೆ. ಕೋಟಿ ಕೋಟಿ ಉದ್ಯೋಗ ಸೃಷ್ಠಿಸುತ್ತೇವೆ ಎಂದು ಹೇಳಿಕೆಗಳನ್ನು ನೀಡುತ್ತಾ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ ದೇಶದ ಅರ್ಥ ವ್ಯವಸ್ಥೆಯನ್ನು ಸಂಪೂರ್ಣ ಅಧೋಗತಿಗೆ ತಳ್ಳಿ ಪದವಿಗಳನ್ನು ಪೂರೈಸಿಕೊಂಡಿರುವ ಯುವಕರು ಉನ್ನತ ಉದ್ಯೋಗಕ್ಕಾಗಿ ಕಾಯುತ್ತಿದ್ದರೆ, ಪ್ರಧಾನಿಗಳು ಪಕೋಡ ಮಾರಾಟ ಮಾಡಿ ಎಂದು ಹೇಳುವ ಮೂಲಕ ನಿರ್ಲಕ್ಷ್ಯದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪುನೀತ್ ತಿಳಿಸಿದರು. ಪ್ರತಿಭಟನೆಯಲ್ಲಿ ಎನ್.ಎಸ್.ಯು.ಐ ಅಧ್ಯಕ್ಷ ಸುಧಾಕರ್, ಉಪಾಧ್ಯಕ್ಷ ಅಶ್ವತ್ಥರೆಡ್ಡಿ, ಎನ್.ಎಸ್.ಯು.ಐ ಉಪಾಧ್ಯಕ್ಷ ಗೋಪಾಲಕೃಷ್ಣ.ಸಿ.ಎಂ. ಯೂಥ್ ಕಾಂಗ್ರೆಸ್ ಅಧ್ಯಕ್ಷ ಜವಾಜಿ, ಮನು, ನವೀನ್, ಪ್ರ.ಕಾರ್ಯದರ್ಶಿ ಶಿವರಾಜ್ ಜಯಸಿಂಹ, ಪು.ಮಹೇಶ್, ಕಸಾಬ ಬ್ಲಾಕ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ಯೂಥ್ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಮಾಂಜಿನಪ್ಪ, ಸಾಮಾಜಿಕ ಜಾಲತಾಣ ಸಂಚಾಲಕರು ಕಿರಣ್ ವಿ.ಗೌಡ ಭಾಗಿಯಾಗಿದ್ದರು.
Comments