ಪ್ರಾದೇಶಿಕ ಪಕ್ಷ ಜೆಡಿಎಸ್ ಪ್ರಾಬಲ್ಯ ಕಂಡು ಅಮಿತ್ ಶಾ ಗೆ ಕಾಡುತ್ತಿರುವ ಭೀತಿ ಯಾವುದು?
ಈಗಾಗಲೇ ರಾಜ್ಯದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಎಲ್ಲಾ ಪಕ್ಷಗಳು ಸಕ್ರಿಯವಾಗಿವೆ. ಕಾಂಗ್ರೆಸ್ ಮುಸ್ಲಿಂ ಮತಗಳನ್ನು ಒಡೆಯುವ ಪ್ರಾದೇಶಿಕ ಪಕ್ಷ ಜೆಡಿಎಸ್ ನೊಂದಿಗೆ ಒಳ ಒಪ್ಪಂದ ಮಾಡಿಕೊಳ್ಳಲು ಅಮಿತ್ ಶಾ ಮುಂದಾಗಿದ್ದಾರೆ ಎಂದು ಸುದ್ದಿಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಮುಸ್ಲಿಂ ಮತಗಳನ್ನು ಛಿದ್ರಗೊಳಿಸಿ ಕಾಂಗ್ರೆಸ್‍ಗೆ ಶಾಕ್ ಕೊಡಲು ಬಿಜೆಪಿ ಚುನಾವಣಾ ತಂತ್ರಗಳನ್ನು ಮಾಡಲು ಯತ್ನಿಸುತ್ತಿದೆ ಎನ್ನಲಾಗಿದೆ. ತಂತ್ರಕ್ಕೆ ಪ್ರತಿತಂತ್ರ ಹೂಡಲು ಎಚ್. ಡಿ.ದೇವೇಗೌಡರು ಮುಂದಾಗಿದ್ದಾರೆ.
ಜೆಡಿಎಸ್ ಪ್ರಾಬಲ್ಯ ಸಾಧಿಸುತಿರುವುದನ್ನು ಕಂಡು ಅಮಿತ್ ಶಾ ಗೆ ರಾಜ್ಯದಲ್ಲಿ ಚುನಾವಣೆಯ ಭೀತಿ ಎದುರಾಗಿದೆ.ಈ ಬಾರಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗೆ ಸೆಡ್ಡು ಹೊಡೆಯಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ್ರು ಮಾಸ್ಟರ್ ಪ್ಲಾನ್ ನೊಂದಿಗೆ ಸಜ್ಜಾಗಿದ್ದಾರೆ. ಆದ್ದರಿಂದ ಅಮಿತ್ ಶಾರ ಈ ತಂತ್ರ ವರ್ಕ್ ಔಟ್ ಆಗಲು ಅಸಾಧ್ಯ ಎನಲಾಗಿದೆ.ಅಷ್ಟೇ ಅಲ್ಲದೆ ಬಿಎಸ್‍ಪಿ ಪಕ್ಷದ ಜೊತೆ ಮೈತ್ರಿಯ ಬಗ್ಗೆ ದೇವೇಗೌಡ್ರು ಚಿಂತನೆ ನಡೆಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಬಿಎಸ್‍ಪಿ ಪಕ್ಷವು ಜೆಡಿಎಸ್ ನೊಂದಿಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಎಲ್ಲಾ ಪ್ರಾದೇಶಿಕ ಪಕ್ಷಗಳು ಒಂದಾಗಿ ಕಾಂಗ್ರೆಸ್ ಹಾಗೂ ಬಿಜೆಪಿಗೆ ಸೆಡ್ಡು ಹೊಡೆಯಲು ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ಮಾಸ್ಟರ್ ಪ್ಲಾನ್ ನಡೆಸುತ್ತಿದೆ. ಜೆಡಿಎಸ್ ನ ಈ ಎಲ್ಲಾ ಬೆಳವಣಿಗೆಗಳನ್ನು ಕಂಡು ಅಮಿತ್ ಶಾ ಗೆ ಚುನಾವಣೆಯ ಭೀತಿ ಎದುರಾಗಿದೆ ಎಂದು ತಿಳಿದು ಬಂದಿದೆ. ಅಮಿತ್ ಶಾರ ಈ ತಂತ್ರ ಮತ್ತೊಮ್ಮೆ ಮಕಾಡೆ ಆಗಲಿದೆ ಎಂದು ಮೂಲಗಳು ತಿಳಿಸಿವೆ.
Comments