ಹಾದ್ರಿಪುರ ಪಂಚಾಯಿತಿ ವ್ಯಾಪ್ತಿಯ ಚಿಕ್ಕಹೆಜ್ಜಾಜಿ ಗ್ರಾಮದಲ್ಲಿ ಸುಮಾರು 30 ಯುವಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ಹಾದ್ರಿಪುರ ಪಂಚಾಯಿತಿ ವ್ಯಾಪ್ತಿಯ ಚಿಕ್ಕಹೆಜ್ಜಾಜಿ ಗ್ರಾಮದಲ್ಲಿ ಸುಮಾರು 30 ಯುವಕರು ನರೇಂದ್ರ ಮೋದಿಯವರು ದೇಶವನ್ನು ಮುನ್ನಡೆಸುತ್ತಿರುವ ರೀತಿ ನೋಡಿ ಮಾಜಿ ಶಾಸಕ ಜೆ.ನರಸಿಂಹಸ್ವಾಮಿಯವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಇದೇ ಸಂದರ್ಭದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಹೆಚ್.ಎಸ್ ಶಿವಶಂಕರ್ ರವರನ್ನು ಸನ್ಮಾನಿಸಲಾಯಿತು. ಬಿಜೆಪಿ ತಾಲ್ಲೂಕು ಅಧ್ಯಕ್ಷರಾದ ಸಿ. ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ನಾಗರಾಜ್, ಎಸ್ಟಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮ್ ಕುಮಾರ್, ಮಾಜಿ ನಗರಸಭಾ ಅಧ್ಯಕ್ಷ ಕೆ.ಬಿ ಮುದ್ದಪ್ಪ, ಹಾಗೂ ಇನ್ನೂ ಮುಂತಾದ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
Comments