ಇಸ್ರೋ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್ ರವರಿಂದ ಚಿನ್ನದ ಪದಕ-ಪ್ರಮಾಣ ಪತ್ರ ನೀಡಿಕೆ
ದೊಡ್ಡಬಳ್ಳಾಪುರ ನಗರದ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ(ಆರ್.ಎಲ್.ಜಾಲಪ್ಪ ಪದವಿ ಕಾಲೇಜು)ದ ಬಿ.ಕಾಂ ವಿದ್ಯಾರ್ಥಿಗಳಾದ ವಿ.ಪಾರ್ವತಿ ಮತ್ತು ಎಸ್.ರಜನಿ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ 53ನೇ ಘಟಿಕೋತ್ಸವ ಸಮಾರಂಭದಲ್ಲಿ ಇಸ್ರೋ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್ ಅವರು ಚಿನ್ನದ ಪದಕ-ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು. ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ ಈ ಮಕ್ಕಳ ಸಾಧನೆ ಇತರೆ ಎಲ್ಲ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಲಿ ಎಂದು ಆಡಳಿತ ಮಂಡಲಿ, ಪ್ರಾಂಶುಪಾಲರು, ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
Comments