ಫೆ. 23 ರಂದು ಜೆಡಿಎಸ್ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ…!!
ಜೆಡಿಎಸ್ ನಿಂದ ಹಿಂದುಳಿದ ವರ್ಗಗಳ ನಾಯಕರ ಹಾಗೂ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್ ಸಿಂಧ್ಯಾ ತಿಳಿಸಿದ್ದಾರೆ.ಫೆ. 23 ಕ್ಕೆ ಶಿವಮೊಗ್ಗ, 24 ಮೈಸೂರು, 25 ಬೆಂಗಳೂರು, 26 ಬೀದರ್ ಹಾಗೂಉ 27 ರಂದು ಬೆಳಗಾವಿಯಲ್ಲಿ ಸಮಾವೇಶ ನಡೆಸಲಾಗುವುದು ಎಂದು ಅವರು ತಿಳಿಸಿದರು.
ದೇವೇಗೌಡರು ಸಿಎಂ, ಪ್ರಧಾನಿಯಾಗಿ ಹಿಂದುಳಿದ ವರ್ಗಗಳಿಗೆ ಮಾಡಿರುವ ಕೆಲಸ ಹಾಗೂ ಕುಮಾರಸ್ವಾಮಿ ಸಿಎಂ ಆಗಿ ಮಾಡಿರುವ ಕೆಲಸ ಕಾರ್ಯಗಳನ್ನು ಈ ಸಮಾವೇಶದಲ್ಲಿ ಜನರಿಗೆ ತಿಳಿಸಲಾಗುವುದು. ಬೆಂಗಳೂರಿನಲ್ಲಿ ಫೆ. 17 ರಂದು ನಡೆಯಲಿರುವ ದಲಿತರ ಬೃಹತ್ ಸಮಾವೇಶದಲ್ಲಿ ಜೆಡಿಎಸ್ ನ 130 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಬಿಎಸ್ ಪಿ ನಾಯಕಿ ಮಾಯಾವತಿ, ದೇವೇಗೌಡರು ಹಾಗೂ ಕುಮಾರಸ್ವಾಮಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
Comments