ಜೆಡಿಎಸ್ ನೊಂದಿಗೆ ಮೈತ್ರಿಗೆ ಮುಂದಾದ ಮತ್ತೊಂದು ಪಕ್ಷ..!
ರಾಜ್ಯ ರಾಜಕಾರಣದಲ್ಲಿ ಕಾವೇರುತ್ತಿರುವ ವಿಧಾನ ಸಭಾ ಚುನಾವಣೆಯಿಂದ ಎಲ್ಲ ರಾಜಕೀಯ ಪಕ್ಷಗಳು ಮೈತ್ರಿಯತ್ತ ಮುಖ ಮಾಡಿವೆ. ಇತ್ತೀಚೆಗಷ್ಟೇ ಜೆಡಿಎಸ್ ಬಿಎಸ್ಪಿ ಯೊಂದಿಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಹಾಗು ಬಿಜೆಪಿಗೆ ಟಾಂಗ್ ಕೊಟ್ಟಿದೆ. ಇದೀಗ ಮತ್ತ್ತೊಂದು ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ.
ಮಹಾರಾಷ್ಟ್ರದಲ್ಲಿ ಪ್ರಬಲವಾಗಿರುವ ಅಲ್ಲಿನ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ನೇತೃತ್ವದ ಎನ್ಸಿಪಿ (ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ) ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿವೆ. ಎನ್ಸಿಪಿ ಈ ಬಾರಿ ರಾಜ್ಯದ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿ ಹೊಂದಿದ್ದು, ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆಯೂ ಚಿಂತನೆ ನಡೆಸಿದೆ. ಒಟ್ಟಿನಲ್ಲಿ ಚುನಾವಣೆಯಲ್ಲಿ ಕಣಕ್ಕಿಳಿಯುವ ಬಗ್ಗೆ ಬಹುತೇಕ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.
Comments