ನಾಳೆ ಜರುಗಲಿರುವ ಜೆಡಿಎಸ್ ಸಮಾವೇಶಕ್ಕೆ ಧಾರವಾಡ ಜಿಲ್ಲೆಯಿಂದ 25-30 ಸಾವಿರ ಕಾರ್ಯಕರ್ತರು

ಫೆ. 17ರಂದು ಬೆಂಗಳೂರಿನ ಯಲಹಂಕ ಹೊರ ವಲಯದ ನಿಟ್ಟೆ ಮೀನಾಕ್ಷಿ ಕಾಲೇಜ್ ರಸ್ತೆಯ ರಾಯನ್ ಶಾಲೆಯ ಮುಂಭಾಗದ 150 ಎಕರೆ ಪ್ರದೇಶದಲ್ಲಿ ಜರುಗಲಿರುವ ಜೆಡಿಎಸ್‍ನ ಬೃಹತ್ ಸಮಾವೇಶಕ್ಕೆ ಧಾರವಾಡ ಜಿಲ್ಲೆಯಿಂದ ಕನಿಷ್ಟ 25 ರಿಂದ 30 ಸಾವಿರ ಕಾರ್ಯಕರ್ತರು ತೆರಳುವ ನಿರೀಕ್ಷೆಯಿದ್ದು, ಇದಕ್ಕಾಗಿ ಜಿಲಾದ್ಯಂತ ಬಸ್, ಕ್ರೂಸರ್ ಹಾಗೂ ಇತರ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಾಜಣ್ಣ ಕೊರವಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜಿಲ್ಲೆಯ ವಿವಿಧ ವಿಧಾನ ಸಭಾ ಕ್ಷೇತ್ರದಿಂದ ಪ್ರತ್ಯೇಕ ಬಸ್, ಕ್ರೂಸರ್ ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, ನವಲಗುಂದ ವಿಧಾನ ಸಭಾ ಕ್ಷೇತ್ರದಿಂದ ಶಾಸಕ ಎನ್.ಹೆಚ್. ಕೋನರಡ್ಡಿ ಅವರ ನೇತೃತ್ವದಲ್ಲಿ 50 ಬಸ್ ಹಾಗೂ 50ಕ್ಕಿಂತ ಹೆಚ್ಚು ಕ್ರೂಸರ್ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅದೇ ರೀತಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ರಾಜಣ್ಣ ಕೊರವಿ ಅವರ ನೇತೃತ್ವದಲ್ಲಿ 50 ಕ್ರೂಸರ್ ವಾಹನ ಹಾಗೂ ಇಪ್ಪತ್ತುಕ್ಕೂ ಹೆಚ್ಚು ಖಾಸಗಿ ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, ಕುಂದಗೋಳ ವಿಧಾನ ಸಭಾ ಕ್ಷೇತ್ರದಿಂದ ಮಾಜಿ ಶಾಸಕ ಎಂ.ಎಸ್. ಅಕ್ಕಿ ಅವರ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಕ್ರೂಸರ್ ವಾಹನ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ಇನ್ನೂಳಿದ ಕ್ಷೇತ್ರಗಳಿಗೂ ಆಯಾ ಮುಖಂಡರಿಗೆ ಜವಾಬ್ದಾರಿ ವಹಿಸಲಾಗಿದ್ದು, ಜಿಲ್ಲೆಯಿಂದ ಕನಿಷ್ಟ 25ರಿಂದ 30 ಸಾವಿರಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರ ದಂಡು ತೆರಳಿದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಾಜಣ್ಣ ಕೊರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Comments