ಮೊರಾರ್ಜಿದೇಸಾಯಿ, ಡಾ|| ಬಿ.ಆರ್. ಅಂಬೇಡ್ಕರ್ ಸರ್ಕಾರಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗೆ ತಡೆಯಾಜ್ಞೆ



ಮೊರಾರ್ಜಿದೇಸಾಯಿ, ಇಂದಿರಾಗಾಂಧಿ, ಡಾ|| ಬಿ.ಆರ್. ಅಂಬೇಡ್ಕರ್, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ವಸತಿ ಶಾಲೆಗಳಲ್ಲಿ 6ನೇ ತರಗತಿ ದಾಖಲಾತಿಗೆ ಫೆಬ್ರವರಿ 18ರಂದು ಸಮಾಜ ಕಲ್ಯಾಣ ಇಲಾಖೆ ನಡೆಸಲು ಉದ್ದೇಶಿಸಿದ್ದ ಪ್ರವೇಶ ಪರೀಕ್ಷೆಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ವಸತಿ ಶಾಲೆಗಳ ದಾಖಲಾತಿಯಲ್ಲಿ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶ ನೀಡದೆ ಶೇಕಡ 100 ಸೀಟುಗಳನ್ನು ಎಸ್.ಸಿ. ಎಸ್.ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ಮೀಸಲಿಟ್ಟಿರುವ ಕ್ರಮ ಪ್ರಶ್ನಿಸಿ ವಿದ್ಯಾರ್ಥಿಗಳ ಪಾಲಕರಾದ ಬೆಳಗಾವಿಯ ವಿಶ್ವನಾಥ ಎಸ್. ಮಠದ್ ಮತ್ತು ಇತರ ಮೂವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗರತ್ನ ಅವರಿದ್ದ ಪೀಠ ಮದ್ಯಂತರ ಆದೇಶ ನೀಡಿ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ, ಬೆಳಗಾವಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಮತ್ತು ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿಗೆ ನೋಟೀಸ್ ಜಾರಿಗೊಳಿಸಿದೆ.
Comments