ಪಠ್ಯಕಷ್ಟೇ ಮಕ್ಕಳನ್ನು ಸೀಮಿತ ಮಾಡದಿರಿ: ಸಂಸದ ಎಸ್.ಪಿ ಮುದ್ದಹನುಮೇಗೌಡ




ಕೊರಟಗೆರೆ ಫೆ.:- ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರ ಪಠ್ಯಕಷ್ಟೇ ಆಧ್ಯತೆಯನ್ನು ನೀಡದೇ ಪಠ್ಯೇತರ ಚಟುವಟಿಕೆಗಳಿಗೂ ಅವಕಾಶ ಮಾಡಿಕೊಡಬೇಕು ಎಂದು ಸಂಸದ ಎಸ್.ಪಿ ಮುದ್ದಹನುಮೇಗೌಡ ತಿಳಿಸಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬುಧವಾರ ನಡೆದ ಆಳ್ವಾಸ್ ನುಡಿಸಿರಿ ವಿರಾಸತ್ ಘಟಕದ ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಪ್ರಸ್ತುತ ಸಮಾಜದಲ್ಲಿ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡುವ ಅವಶ್ಯಕತೆಯಿದೆ ಶಿಕ್ಷಣದೊಂದಿಗೆ ಸಾಮಾನ್ಯ ಜ್ಞಾನ, ಸಾಂಸ್ಕೃತಿಕ ಕಲಾ ಚಟುವಟಿಗಳು, ಯೋಗ ಸೇರಿದಂತೆ ಕ್ರೀಡೆಗಳಲ್ಲಿ ಮಕ್ಕಳ ಪ್ರತಿಭೆ ಮತ್ತು ಗುರುತಿಸಿ ಪ್ರೋತ್ಸಹಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದ್ದು ಈ ನಿಟ್ಟಿನಲ್ಲಿ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಈ ಕೆಲಸ ಮಾಡುತ್ತಿದೆ ಎಂದು ಪ್ರಶಂಸಿಸಿದರು.
ನಮ್ಮ ದೇಸೀ ಕಲೆಗಳನ್ನು ವಿಶ್ವಕ್ಕೆ ಸಾರುವ ಕೆಲಸವನ್ನು ಶಿಕ್ಷಣ ಸಂಸ್ಥೆಗಳು ಮಾಡಬೇಕಿದ್ದು ಮೂಡಬಿದರೆಯ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆ ತುಮಕೂರು ಜಿಲ್ಲ್ಲೆಯ 800 ವಿದ್ಯಾಥರ್ಿಗಳು ವ್ಯಾಸಂಗ ಸಂಸ್ಥೆಯ ಗುಣಮಟ್ಟವನ್ನು ಸೂಚಿಸುತ್ತದೆ ಎಂದರು.
ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವಾ ಮಾತನಾಡಿ ಸಂಸ್ಥೆಯಲ್ಲಿ 26 ಸಾವಿರ ವಿದ್ಯಾಥರ್ಿಗಳಿದ್ದು ಸಂಸ್ಥೆಯಲ್ಲಿ ಶಿಕ್ಷಣದೊಂದಿಗೆ ಸಾಂಸ್ಕೃತಿಕ, ಯೋಗ ಸೇರಿದಂತೆ ಕ್ರೀಡಾ ತರಬೇತಿಗಳನ್ನು ಸಹ ನೀಡುತ್ತಿದ್ದು ನಮ್ಮ ದೇಸೀಯ ಕಲೆಗಳನ್ನು ದೇಶದಲ್ಲಿ ಮತ್ತು ವಿದೇಶಗಳಲ್ಲಿ ಜನಪ್ರಿಯ ಗೊಳಿಸಲು ಶಿಕ್ಷಣ ಸಂಸ್ಥೆ ಮಾಡುತ್ತಿದೆ ಎಂದರು.
ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಕಾರ್ಯಕ್ರಮ ಆಯೋಜನೆಯನ್ನು ಮಾಡಿದ್ದರು. ಕಾರ್ಯಕ್ರಮದಲ್ಲಿ ಹೇಮಾವತಿ ನಾಲಾ ಮುಖ್ಯ ಅಭಿಯಂತಕ ಜಯಪ್ರಕಾಶ್, ಜಿ.ಪಂ ಸದಸ್ಯ ಕೆಂಚಮಾರಯ್ಯ, ಮಾಜಿ ಜಿ.ಪಂ ಸದಸ್ಯ ಪಿ.ಎಸ್ ಕೃಷ್ಣಮೂತರ್ಿ, ಮಾಜಿ ಪ.ಪಂ ಅಧ್ಯಕ್ಷ ಎ.ಡಿ ಬಲರಾಮಯ್ಯ, ಮುಖಂಡರಾದ ಚಿಕ್ಕರಂಗಯ್ಯ, ಮಯೂರಗೋವಿಂದರಾಜು ಸೇರಿದಂತೆ ಇತರರು ಇದ್ದರು.
(ಚಿತ್ರ ಇದೆ)
ಎಲ್ಲಾ ಮಕ್ಕಳು ಪ್ರತಿಭಾನ್ವಿತರಾಗಿಯೇ ಇರುತ್ತಾರೆ ಆದರೆ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವ ಕೆಲಸವನ್ನು ಪೋಷಕರು ಮತ್ತು ಶಿಕ್ಷಕರು ಶಿಕ್ಷಣ ಸಂಸ್ಥೆಗಳು ಮಾಡಬೇಕಿದ್ದು ಇದಕ್ಕೆ ಆಳ್ವಾಸ್ ಶಿಕ್ಷಣ ಸಂಸ್ಥೆ ಮಾದರಿಯಾಗಿದ್ದು ಎಲ್ಲಾ ಮಕ್ಕಳಿಗೆ ಮುಕ್ತ ಅವಕಾಶ ನೀಡುವುದರೊಂದಿಗೆ ಇಡೀ ದೇಶದಲ್ಲಿ ಮಾದರಿ ಶಿಕ್ಷಣ ಸಂಸ್ಥೆಯಾಗಿದೆ
Comments