ದಕ್ಷಿಣ ಮತಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಸಾಮಾಜಿಕ ಕಾರ್ಯಕರ್ತ ಜೆಡಿಎಸ್ ನಿಂದ ಕಣಕ್ಕೆ..!!



ದಕ್ಷಿಣ ಮತಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಸಾಮಾಜಿಕ ಕಾರ್ಯಕರ್ತ ಜೆಡಿಎಸ್ ಪಕ್ಷದಿಂದ ಕಣಕ್ಕೆ ಇಳಿಯಲು ಮುಂದಾಗಿದ್ದಾರೆ.ಜೆಡಿಎಸ್ ರಾಜ್ಯಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದ ಸಾಮಾಜಿಕ ಕಾರ್ಯಕರ್ತ ಬಸವರಾಜ ದಿಗ್ಗಾಯಿ ಅವರು, ಇಂದು ತಮ್ಮ ಸಾವಿರಾರು ಸಂಖ್ಯೆಯ ಅಭಿಮಾನಿಗಳ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಪಾದಾರ್ಪಣೆ ಮಾಡಲಿದ್ದಾರೆ.
ಜೇವರ್ಗಿ ರಸ್ತೆಯ ಕೋಟನೂರ ಮಠದಿಂದ ಸಾರ್ವಜನಿಕ ಉದ್ಯಾನವನದ ಹತ್ತಿರ ಇರುವ ಜೆಡಿಎಸ್ ಕಚೇರಿಗೆ ಬೃಹತ್ ಮೆರವಣಿಗೆ ನಡೆಸಿ ಪಕ್ಷದ ಅಭ್ಯರ್ಥಿಯಾಗಿ ಅಧಿಕೃತವಾಗಿ ಪತ್ರ ಪಡೆದರು.ದಿಗ್ಗಾಯಿ ಯಾವ ಪಕ್ಷದಿಂದ ಕಣ್ಣಕ್ಕೆ ಇಳಿಯಲಿದ್ದಾರೆ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿ ಇರಲಿದ್ದಾರೆ ಎಂಬ ಚರ್ಚೆ ನಡೆದಿತ್ತು.ಇದೀಗ ಜೆಡಿಎಸ್ ಪಕ್ಷ ಸೇರುವ ಮೂಲಕ ಎಲ್ಲ ಚರ್ಚೆಗಳಿಗೆ ಬಸವರಾಜ ದಿಗ್ಗಾಯಿ ಫುಲ್ ಸ್ಟಾಪ್ ಹಾಕಿದ್ದಾರೆ. ಈಗಾಗಲೇ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಮೊದಲನೇ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ದಕ್ಷಿಣ ಮತಕ್ಷೇತ್ರದ ಅಭ್ಯರ್ಥಿಯಾಗಿ ಬಸವರಾಜ ದಿಗ್ಗಾಯಿ ಹೆಸರು ಸಹ ಇದೆ.
Comments