'ಕಮಲ' ಬಿಟ್ಟು 'ತೆನೆ' ಹೊತ್ತ ಪ್ರಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ..!!
ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಾದ ಜೆಪಿ ಭವನದಲ್ಲಿ ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕ ಅವರು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.
ಹೌದು.,ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಾದ ಜೆಪಿ ಭವನದಲ್ಲಿ ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕರಾದ ಎಸ್ ಮಹೇಂದ್ರ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಸಮುಖದಲ್ಲಿ ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಸಂಸದರು ಸಿ ಎಸ್ ಪುಟ್ಟರಾಜು, ಮಾಜಿ ಸಚಿವರಾದ ಬಂಡೆಪ್ಪ ಕಾಶಂಪುರ್, ಶಾಸಕರು ಕರ್ನಾಟಕ ವಿಧಾನ ಪರಿಷತ್ ಟಿಎ ಶರವಣ ಹಾಗೂ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್ ಕೆ ಕುಮಾರಸ್ವಾಮಿ ಅವರು ಹಾಜರಿದ್ದರು.
Comments