ಕರಾವಳಿಯ ರಾಜಕೀಯ ಬೆಳವಣಿಗೆಯೊಂದಿರುವ ಪ್ರಭಾವಿ ‘ಕೈ’ ಮುಖಂಡ ‘ತೆನೆ’ ಹೊರಲು ಮುಹೂರ್ತ ಫಿಕ್ಸ್ ..!!



ಕರಾವಳಿಯಲ್ಲಿ ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಮೇಯರ್ ಹಾಗೂ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಅಶ್ರಫ್ ಜೆಡಿಎಸ್ ಸೇರುವುದು ಖಚಿತವಾಗಿದ್ದು, ಮಾರ್ಚ್ 6 ರಂದು ಸಂಜೆ 4 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.
ಅಂದು ಮಧ್ಯಾಹ್ನ 2 ಗಂಟೆಗೆ ಬಂದರಿನಿಂದ ಬೃಹತ್ ಮೆರವಣಿಗೆ ಮೂಲಕ ಪುರಭವನಕ್ಕೆ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅಶ್ರಫ್,ಅಲ್ಪಸಂಖ್ಯಾತರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಕಾಂಗ್ರೆಸ್ ನಲ್ಲಿ ಇರುವಾಗಲೇ ರಾಜ್ಯ ಸರ್ಕಾರದ ವಿರುದ್ಧವೇ ಧ್ವನಿ ಎತ್ತಿದ್ದರು.ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸಚಿವ ಯು.ಟಿ.ಖಾದರ್ ಅವರ ಎದುರು ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
Comments