'ಕೈ' ಪಕ್ಷ ಬಿಟ್ಟು 'ಹೊರೆ' ಹೊತ್ತ ಹಲವು ನಾಯಕರು..!!




ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯದ ಅಲೆ ಎದ್ದಿದೆ. ಅನ್ಯ ಪಕ್ಷಗಳ ನಾಯಕರು ಜೆಡಿಎಸ್ ನತ್ತ ಮುಖ ಮಾಡುತಿರುವುದು ಕಂಡು ಬರುತ್ತಿದೆ.
ಮಾಲೂರಿನಲ್ಲಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ಟಿ.ಬಿ.ಕೃಷ್ಣಪ್ಪ ಸೇರಿದಂತೆ ಹಲವಾರು ಮುಖಂಡರು ಶಾಸಕ ಕೆ.ಎಸ್.ಮಂಜುನಾಥ್ ಗೌಡ ರವರ ನೇತೃತ್ವದಲ್ಲಿ ತಾಲ್ಲೂಕಿನ ಅಭಿವೃದ್ಧಿ ಹಾಗೂ ಶಾಸಕರ ಕಾರ್ಯವೈಕರಿ ಮೆಚ್ಚಿ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಲೂರು ತಾಲ್ಲೂಕಿನಲ್ಲಿ ಬೈಕ್ ಜಾಥಾ ನಡೆಸಿ ಜೆಡಿಎಸ್ ಪ್ರಬಲವನ್ನು ತೋರಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಯ ಅನುಸಾರ ಜೆಡಿಎಸ್ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಎರಡು ಮಾತಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments