ದೊಡ್ಡಬಳ್ಳಾಪುರ ತಾಲ್ಲೂಕು ರೇಷ್ಮೆ ಬೆಳೆಗಾರ ರೈತರ ಸಮಾವೇಶ






ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ, ಕೊಡತಿ, ಬೆಂ. ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಭೇತಿ ಸಂಸ್ಥೆ, ಕೇಂದ್ರ ರೇಷ್ಮೆ ಮಂಡಲಿ, ವಸ್ತ್ರ ಮಂತ್ರಾಲಯ, ಭಾರತ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ರೇಷ್ಮೆ ಇಲಾಖೆ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ರೈತರಿಗೆ ರೇಷ್ಮೆ ಬೆಳೆ ಬೆಳೆಯಲು ಕೇಂದ್ರ ರೇಷ್ಮೆ ಮಂಡಲಿ ಅಧ್ಯಕ್ಷರಾದ ಶ್ರೀ ಕೆ.ಎಂ. ಹನುಮಂತರಾಯಪ್ಪನವರ ಅಧ್ಯಕ್ಷತೆಯಲ್ಲಿ ರೈತ ಬೆಳೆಗಾರರ ವಿಶೇಷ ಸಮಾವೇಶವನ್ನು ದಿನಾಂಕ 28-2-2018ನೇ ಬುಧವಾರ ಬೆಳಿಗ್ಗೆ 10-30ಕ್ಕೆ ಒಕ್ಕಲಿಗರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ. ತಾಲ್ಲೂಕಿನ ರೈತರು ಭಾಗವಹಿಸಿ ರೇಷ್ಮೆ ಕೃಷಿಯ ಬಗ್ಗೆ ಹಾಗೂ ಕೇಂದ್ರ, ರಾಜ್ಯ ಸರ್ಕಾರಗಳು ನೀಡುತ್ತಿರುವ ವಿಶೇಷ ಸಹಾಯಧನ ಸೌಲಭ್ಯಗಳ ಕುರಿತು ತಿಳಿದುಕೊಳ್ಳಲು ಸದವಕಾಶ ಆಗಿರುತ್ತದೆ, ಎಲ್ಲ ರೈತರು ರೇಷ್ಮೆ ಕೃಷಿಯ ಬಗ್ಗೆ ತಿಳಿದುಕೊಂಡು ರೇಷ್ಮೆ ಬೆಳೆ ಬೆಳೆದು ಲಾಭ ಗಳಿಸಬಹುದು ಎಂದು ವೆಂಕಟೇಶ್, ಅಧ್ಯಕ್ಷರು, ತಾಲ್ಲೂಕು ಬಿಜೆಪಿ ರೈತ ಮೋರ್ಚಾ, ತಿಳಿಸಿರುತ್ತಾರೆ.
Comments