‘ಕೈ’ ಪಕ್ಷ ಬಿಟ್ಟ ಮುಖಂಡನಿಗೆ ಅಧಿಕೃತ ಹೊರೆ ಹೊರೆಸಿದ ದೇವೇಗೌಡ್ರು..!!
ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ ಎಂದು ಸಿಎಂ ಆದಿಯಾಗಿ ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆ ಮುನಿಸಿಕೊಂಡು ಕಾಂಗ್ರೆಸ್ ತೊರೆದಿದ್ದ ಇಲ್ಲಿನ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ್ ಅವರಿಗೆ ಜೆಡಿಎಸ್ ಪಕ್ಷದಲ್ಲಿ ಈಗ ಅಧಿಕೃತ ಹುದ್ದೆ ಸಿಕ್ಕಿದೆ.
ಕಳೆದ ಎರಡು ವಾರದಿಂದ ಪಕ್ಷದ ವಿವಿಧ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಾ ಪಕ್ಷ ಸಂಘಟನೆಗೆ ಶ್ರಮಿಸುತ್ತಿರುವ ಶ್ರೀನಾಥ್ ಅವರಿಗೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿದ್ದಾರೆ. ಜೊತೆಗೆ ಹೈದರಾಬಾದ್ ಕರ್ನಾಟಕದ ಉಸ್ತುವಾರಿಯನ್ನೂ ನೀಡಿ ಎಲ್ಲ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಂಡು ಪಕ್ಷ ಸಂಘಟನೆ ಮಾಡುವಂತೆ ಸೂಚನೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಕೊಪ್ಪಳ ಜಿಲ್ಲೆಯಲ್ಲಿ ಅದೂ ಗಂಗಾವತಿಯಲ್ಲಿ ಟಾಂಗ್ ನೀಡಲು ಜೆಡಿಎಸ್ ಪಕ್ಷ ತಂತ್ರ ಹೆಣೆದಿದೆ.
Comments