ರಾಜ್ಯವನ್ನು ಕತ್ತಲೆಯಿಂದ ಬೆಳಕಿನ ಕಡೆ ಕೊಂಡೊಯ್ಯಿದ ಡಿಕೆಶಿ
ಬೇಸಿಗೆ ಸಮಿಸುತ್ತಿದ್ದಂತೆ ಕರ್ನಾಟಕದಲ್ಲಿ ಕುಡಿಯುವ ನೀರಿಗೆ ಹಾಗು ವಿದ್ಯುತ್ ಚ್ಛಕ್ತಿ ಅಭಾವ ಉಟಾಗುತ್ತಿತ್ತು. ಆದರೆ ರಾಜ್ಯದಲ್ಲಿ 2013 ಕ್ಕೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ವಿದ್ಯುತ್ ಸ್ವಾವಲಂಬನೆ ಸಾಧಿಸಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ನೂತನ ಶಾಖೋತ್ಪನ್ನ ಕೇಂದ್ರಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಇಂಧನ ಸಚಿವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರ ನಡೆಸುತ್ತಿದ್ದ ಅವಧಿಯಲ್ಲಿ ಕತ್ತಲೆ ಕರ್ನಾಟಕ ಎಂಬ ಹಣೆಪಟ್ಟಿಗೆ ರಾಜ್ಯ ಒಳಗಾಗಿತ್ತು. ಇಂದು ಕಾಂಗ್ರೆಸ್ ಸರ್ಕಾರ ಹಣೆಪಟ್ಟಿಯನ್ನು ಕಳಚಿಕೊಂಡು ಹೊರಬಂದಿದೆ ಎಂದು ಹೇಳಿದರು. ಇನ್ನು ಮುಂದಿನ ದಿನಗಳಲ್ಲೂ ಹಗಲಿನಲ್ಲಿಯೂ ರಾಜ್ಯಕ್ಕೆ ವಿದ್ಯುತ್ ನೀಡುವಷ್ಟು ನಾವು ಶಕ್ತರಾಗಿದ್ದೇವೆ. ಪರೀಕ್ಷೆಯ ಸಮಯದಲ್ಲಿ ರಾಜ್ಯದಲ್ಲಿ ವಿದ್ಯುತ್ ಕಡಿತ ಮಾಡಲ್ಲ ಎಂದರು.
Comments