ಉತ್ತರ ಕರ್ನಾಟಕದಲ್ಲಿ ರಾರಾಜಿಸಲಿರುವ ಜೆಡಿಎಸ್ ಪತಾಕೆ..!!
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವ ಎಲ್ಲ ಲಕ್ಷಣಗಳು ಸಹ ಎದ್ದು ಕಾಣುತ್ತಿವೆ. ರಾಷ್ಟೀಯ ಪಕ್ಷಗಳಿಗೆ ಸೆಡ್ಡು ಹೊಡೆಯಲು ಸಜ್ಜಾಗಿರುವ ಜೆಡಿಎಸ್. ಇದಕ್ಕೆ ಸಾಕ್ಷಿ ಎಂಬಂತೆ ಉತ್ತರ ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಎರಡರಿಂದ ಮೂರು ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಚುನಾವಣೆ ಹತ್ತಿರವಾಗುತ್ತಿದ್ದಂತೆ ಎರಡೂ ರಾಷ್ಟ್ರೀಯ ಪಕ್ಷಗಳ ನಾಯಕರು ಉತ್ತರ ಕರ್ನಾಟಕ ಪ್ರವಾಸ ನಡೆಸುತ್ತಿದ್ದಾರೆ. ಆದರೆ, ಈ ಎರಡೂ ಪಕ್ಷಗಳಿಗಿಂತ ನಾನು ಪ್ರಚಾರದಲ್ಲಿ ಮುಂದಿದ್ದೇನೆ. ಅವರ ತರಹ ಮಿರ್ಚಿ ಮಂಡಕ್ಕಿ ತಿಂದು ಡಾಬಾದಲ್ಲಿ ಪ್ರಚಾರ ನಡೆಸಿಲ್ಲ. ನನಗೆ ಈ ಕ್ಷೇತ್ರದ ಜನರ ಮೇಲೆ ವಿಶ್ವಾಸವಿದೆ. ಮತದಾರರು ಜೆಡಿಎಸ್ ಕೈ ಬಿಡುವುದಿಲ್ಲ ಎಂದು ಹೇಳಿದರು. ರಾಜ್ಯದ ಇತಿಹಾಸದಲ್ಲಿ ಚುನಾವಣೆ ದಿನಾಂಕ ನಿಗದಿಗೂ ಮುನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಜೆಡಿಎಸ್. ಮೊದಲನೇ ಪಟ್ಟಿ ಬಿಡುಗಡೆಯಾದಾಗ ಅನೇಕರು ಲಘುವಾಗಿ ಮಾತನಾಡಿದ್ದಾರೆ. ಇದಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು. ಮಹದಾಯಿ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳು ಕರ್ನಾಟಕದ ಜನರ ದಾರಿ ತಪ್ಪಿಸುತ್ತಿದ್ದಾರೆ. ಈ ಬಗ್ಗೆ ಉತ್ತರ ಕರ್ನಾಟಕ ಜನರು ಎಚ್ಚೆತ್ತುಕೊಳ್ಳಬೇಕು. ಪ್ರಧಾನಿ ಮೋದಿ ಮನಸು ಮಾಡಿದರೆ ಈ ಸಮಸ್ಯೆಯನ್ನು ಬಗೆಹರಿಸಬಹುದು. ಆದರೆ, ಅವರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದರು.
Comments