ಕಮಲ ಜಾತ್ರೆಯ ಉದ್ಘಾಟನೆಯಲ್ಲಿ ಬಾಲ್ಯದ ದಿನಗಳನ್ನು ನೆನಪಿಸಿಕೊಂಡ ಮಾಜಿ ಶಾಸಕರಾದ ಜೆ. ನರಸಿಂಹಸ್ವಾಮಿ

03 Mar 2018 7:00 AM |
494 Report

ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಆಯೋಜಿಸಲಾಗಿರುವ ಕಮಲ ಜಾತ್ರೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತಾನಾಡಿದ ಜನಪ್ರಿಯ ಮಾಜಿ ಶಾಸಕರಾದ ಜೆ.ನರಸಿಂಹಸ್ವಾಮಿ ರವರು ಸಾರ್ವಜನಿಕರಿಗಾಗಿ ಅಯೋಜಿಸಿರುವ ಈ ಜಾತ್ರೆ ನೋಡಿದಾಗ ನನಗೆ ನನ್ನ ಬಾಲ್ಯ ನೆನಪಾಯಿತು ಎಂದೂ ತಿಳಿಸಿದರು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತ್ವತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಮತ್ತೆ ಬಿಜೆಪಿ ಅಭ್ಯರ್ಥಿಯಾದ ನಾನು ಶಾಸಕನಾಗುವುದು ಖಚಿತ ಎಂದೂ ಹೇಳಿದರು. ಕೇಂದ್ರ ರೇಷ್ಮೆ ಮಂಡಳಿಯ ಅಧ್ಯಕ್ಷರಾದ ಕೆ.ಎಂ.ಹನುಮಂತರಾಯಪ್ಪನವರು, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ರಾಜಣ್ಣರವರು, ಜೋ.ನಾ.ಮಲ್ಲಿಕಾರ್ಜುನ್ ರವರು, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಎಸ್.ಶಿವಶಂಕರ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳು ನಾಗರಾಜು, ನಗರ ಬಿಜೆಪಿ ಅಧ್ಯಕ್ಷರಾದ ಕೆ.ಎಚ್.ರಂಗರಾಜು ಇನ್ನು ಅನೇಕ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

Edited By

Ramesh

Reported By

Ramesh

Comments