ಬಿಜೆಪಿಯ ಮತ್ತೊಂದು ವಿಕೆಟ್ ಜೆಡಿಎಸ್ ತೆಕ್ಕೆಗೆ..!!
2018 ರ ಕರ್ನಾಟಕ ವಿಧಾನಸಭಾ ಚುನಾವಣೆ ಬಾರಿ ಕುತೂಹಲ ಕೆರಳಿಸಿದೆ. ಅನ್ಯ ಪಕ್ಷಗಳಿಂದ ಹಲವಾರು ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತಿರುವುದು ಕಂಡು ಬರುತ್ತಿದೆ. ಅಲ್ಲದೆ ಜೆಡಿಎಸ್ ಎಲ್ಲ ಚಟುವಟಿಕೆಯಲ್ಲೂ ಬಹಳ ಆಸಕ್ತಿಯಿಂದ ಕೆಲಸ ಮಾಡುತ್ತಿದೆ. ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗುತ್ತಿರುವ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಿಬಿಎಂಪಿ ಮಾಜಿ ಸದಸ್ಯ ಕೆ.ಸಿ.ವೆಂಕಟೇಶ್ ಅವರ ನಿವಾಸಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಭೇಟಿ ನೀಡಲಿದ್ದಾರೆ.
ಜಾಲಹಳ್ಳಿ ಬಳಿಯ ಅಬ್ಬಿಗೆರೆ ಮುಖ್ಯರಸ್ತೆ, ಕಮ್ಮಗೊಂಡನಹಳ್ಳಿಯಲ್ಲಿನ ವೆಂಕಟೇಶ್ ನಿವಾಸಕ್ಕೆ ಶನಿವಾರ ಬೆಳಗ್ಗೆ 8.30ರ ಸುಮಾರಿಗೆ ತೆರಳಿ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಜೆಡಿಎಸ್‌ನ ಸ್ಥಳೀಯ ನಾಯಕರು ಉಪಸ್ಥಿತರಿರುವರು.ವೆಂಕಟೇಶ್ ಅವರು ಈ ಮೊದಲು ಬಿಬಿಎಂಪಿಯ ಸದಸ್ಯರಾಗಿದ್ದು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಗೆಲುವಿಗೆ ಶ್ರಮಿಸಲಿದ್ದಾರೆ ಎನ್ನಲಾಗಿದೆ.ಈ ಎಲ್ಲ ಬೆಳವಣಿಗೆಗಳು ನೋಡುತ್ತಿದರೆ ಜೆಡಿಎಸ್ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯುವ ಎಲ್ಲ ಲಕ್ಷಣಗಳಿವೆ ಎಂದು ಮೂಲಗಳು ತಿಳಿಸಿವೆ.
Comments