'ಕೈ- ಕಮಲ' ದ ಪ್ರಭಾವಿ ಮುಖಂಡರು ಜೆಡಿಎಸ್ ಗೆ ಸೇರ್ಪಡೆ...!!
ಮಂಗಳೂರಿನಲ್ಲಿ ನಡೆದ ಬಲ್ಲವರೊಡನೆ ಬೌದ್ದಿಕ ಚಿಂತನೆ ಕಾರ್ಯಕ್ರಮವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಉದ್ಘಾಟನೆ ಮಾಡಿದ್ದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಮೇಯರ್ ಹಾಗೂ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್ ಹಾಗೂ ಬಿಜೆಪಿಯ ಮಾಜಿ ಮೂಡ ಅಧ್ಯಕ್ಷರಾದ ರಮೇಶ್ ರವರು ಮತ್ತು ಅನೇಕ ವಿವಿದ ಪಕ್ಷದ ನಾಯಕರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಇದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ಈ ಎಲ್ಲ ಬೆಳವಣಿಗೆಯ ಅನುಸಾರ ಜೆಡಿಎಸ್ ಈ ಬಾರಿ ಅಧಿಕಾರದ ಚೂಕಾಣಿ ಹಿಡಿಯುವುದು ನಿಶ್ಚಿತ ಎಂದು ಮೂಲಗಳು ತಿಳಿಸಿವೆ.
ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅಶ್ರಫ್,ಅಲ್ಪಸಂಖ್ಯಾತರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಕಾಂಗ್ರೆಸ್ ನಲ್ಲಿ ಇರುವಾಗಲೇ ರಾಜ್ಯ ಸರ್ಕಾರದ ವಿರುದ್ಧವೇ ಧ್ವನಿ ಎತ್ತಿದ್ದರು.ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸಚಿವ ಯು.ಟಿ.ಖಾದರ್ ಅವರ ಎದುರು ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
Comments