ರಾಜ್ಯಸಭಾ ಚುನಾವಣೆಯ ಬಗ್ಗೆ ಅಚ್ಚರಿ ವಿಷಯ ಬಿಚ್ಚಿಟ್ಟ ಎಚ್ ಡಿಕೆ..!!
ರಾಜ್ಯ ವಿಧಾನಸಭೆಯಿಂದ ರಾಜ್ಯ ಸಭೆಗೆ ಮಾ.23 ರಂದು ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯನ್ನು ಸ್ಪರ್ಧೆಗಿಳಿಸಲು ನಿರ್ಧರಿಸಲಾಗಿದೆ. ಈಗ ಜೆಡಿಎಸ್ ಶಾಸಕರ ಸಂಖ್ಯೆ 31 ಇದೆ. ಅದು 40 ಆಗಲೂಬಹುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ಹಿಂದೆ ನಡೆದ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್‌ನ 7 ಶಾಸಕರನ್ನು ಕಾಂಗ್ರೆಸ್‌ನವರು ಸೆಳೆದುಕೊಂಡು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡರು. ಈಗ ಜೆಡಿಎಸ್ ಸದಸ್ಯ ಬಲ 31 ಇದೆ. ಅದು 40 ಆಗಲೂಬಹುದು. ನಾವು ಜೆಡಿಎಸ್ ಬೆಂಬಲ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹತ್ತಿರ ಅರ್ಜಿ ಹಿಡಿದುಕೊಂಡು ಹೋಗಿಲ್ಲ. ಜೆಡಿಎಸ್ ಮುಖಂಡರು ಕಾಂಗ್ರೆಸ್ ವರಿಷ್ಠರ ಬಳಿ ಚರ್ಚೆ ನಡೆಸುತ್ತಿದ್ದಾರೆ ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಿ ಎಂದರು. ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಸ್ಪರ್ಧೆಗಿಳಿಸದಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಾಯಿತು ಎಂದು ಜೆಡಿಎಸ್‌ಗೆ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿರಲಿಲ್ಲವೇ ? ಬಿಬಿಎಂಪಿಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ನಾವೇನು ಕಾಂಗ್ರೆಸ್‌ನವರ ಮನೆ ಬಾಗಿಲಿಗೆ ಹೋಗಿರಲಿಲ್ಲ. ಅವರೇ ನಮ್ಮ ಮನೆ ಬಾಗಿಲಿಗೆ ಬಂದಿದ್ದರು ಎಂದೂ ಕುಮಾರಸ್ವಾಮಿ ಹೇಳಿದರು.
Comments