ದಾಸರಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಗೆ ಸೆಡ್ಡು ಹೊಡೆಯಲು ಜೆಡಿಎಸ್ ಮಾಸ್ಟರ್ ಪ್ಲಾನ್..!!
ಪೀಣ್ಯ ಕೈಗಾರಿಕಾ ಪ್ರದೇಶವನ್ನು ತನ್ನ ಒಡಲಲ್ಲಿ ಹೊಂದಿರುವ ಕ್ಷೇತ್ರ ದಾಸರಹಳ್ಳಿ. ಕ್ಷೇತ್ರದ ಹಾಲಿ ಶಾಸಕರು ಬಿಜೆಪಿಯ ಎಸ್.ಮುನಿರಾಜು. ಎರಡು ಚುನಾವಣೆಗಳಲ್ಲಿ ಗೆದ್ದಿರುವ ಅವರು ಈ ಬಾರಿಯೂ ಗೆಲುವು ಸಾಧಿಸಿ ಹ್ಯಾಟ್ರಿಕ್ ಬಾರಿಸುವ ಉತ್ಸಾಹದಲ್ಲಿದ್ದಾರೆ. ಆದರೆ ಈ ಬಾರಿ ಗೆಲುವು ಸಾಧಿಸುವುದು ಅಷ್ಟು ಸುಲಭವಲ್ಲ. ದಾಸರಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಗೆ ಸೆಡ್ಡು ಹೊಡೆಯಲು ಜೆಡಿಎಸ್ ತಂತ್ರ ರೂಪಿಸಿವೆ. ಸ್ವತಃ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಕ್ಷೇತ್ರದ ಮೇಲೆ ಹೆಚ್ಚಿನ ಗಮನಹರಿಸಿದ್ದು, ಈ ಬಾರಿ ಅಭ್ಯರ್ಥಿ ಗೆಲ್ಲಿಸಲು ಪಣ ತೊಟ್ಟಿದ್ದಾರೆ.
ಆರ್.ಮಂಜುನಾಥ್ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. 2013ರ ಚುನಾವಣೆಯಲ್ಲಿ 1.91 ಲಕ್ಷ ಮತದಾರರು ಹಕ್ಕು ಚಲಾವಣೆ ಮಾಡಿದ್ದರು. ಕ್ಷೇತ್ರದ ವ್ಯಾಪ್ತಿಯಲ್ಲಿರುವ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುವ ವಲಸಿಗರು ಹೆಚ್ಚು. ಈ ಬಾರಿ ಮತದಾರರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಎಸ್.ಎಂ.ಕೃಷ್ಣ ಅವರಿಗೆ ಗನ್ ಮ್ಯಾನ್ ಆಗಿದ್ದ ಆರ್.ಮಂಜುನಾಥ್ ಜೆಡಿಎಸ್ ಅಭ್ಯರ್ಥಿ. ಗನ್ ಮ್ಯಾನ್ ಮಂಜಪ್ಪ ಎಂದು ಅವರು ಪ್ರಸಿದ್ಧಿ ಪಡೆದಿದ್ದಾರೆ. ಕೆಲವು ದಿನಗಳ ಹಿಂದೆ ಜೆಡಿಎಸ್ ಸೇರಿದ್ದರು. ಸ್ವತಃ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಕ್ಷೇತ್ರದ ಮೇಲೆ ಹೆಚ್ಚಿನ ಗಮನಹರಿಸಿದ್ದು, ಈ ಬಾರಿ ಅಭ್ಯರ್ಥಿ ಗೆಲ್ಲಿಸಲು ಪಣ ತೊಟ್ಟಿರುವ ಕಾರಣ ಈ ಬಾರಿ ದಾಸರಹಳ್ಳಿ ಕ್ಷೇತ್ರವನ್ನು ಜೆಡಿಎಸ್ ವಶಕ್ಕೆ ಪಡೆಯಲಿದೆ ಎಂದು ಮೂಲಗಳು ತಿಳಿಸಿವೆ.
Comments