ಜೆಡಿಎಸ್ ಭದ್ರಕೋಟೆಯಾಗಿರುವ ಹೊಳೆನರಸೀಪುರದಲ್ಲಿ ಭರ್ಜರಿ ಗೆಲುವಿನತ್ತ ಎಚ್.ಡಿ.ರೇವಣ್ಣ



ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ಜೆಡಿಎಸ್ ನ ಭದ್ರಕೋಟೆ. ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಎಚ್.ಡಿ. ರೇವಣ್ಣ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೇ ಕ್ಷೇತ್ರದಲ್ಲಿ ಜೆಡಿಎಸ್ ಬಲವಾಗಿ ಬೇರೂರುವಂತೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳಿಂದ ತಮ್ಮದೇ ಆದ ವೈಯಕ್ತಿಕ ವರ್ಚಸ್ಸು ಸೃಷ್ಠಿಸಿಕೊಂಡಿದ್ದಾರೆ. ಈ ಕಾರಣದಿಂದಲೋ ಏನೊ ಕ್ಷೇತ್ರದಲ್ಲಿನ ಇನ್ನೂಳಿದ ಪಕ್ಷಗಳಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಗಳು ಕಾಣಸಿಗುತ್ತಿಲ್ಲ.
ಈ ವಿಧಾನಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳೇ ನಿರ್ಣಾಯಕ ಹಾಗೂ ಪ್ರಾಬಲ್ಯ. ಮೂರು ಪಕ್ಷಗಳಿಂದ ಒಕ್ಕಲಿಗ ನಾಯಕರೇ ಸ್ಪರ್ಧೆ ಬಯಸುತ್ತಿದ್ದಾರಾದರೂ ಒಕ್ಕಲಿಗ ಸಮುದಾಯದ ನಾಯಕರಾಗಿ ದೇವೇಗೌಡ ಹಾಗೂ ಅವರ ಕುಟುಂಬ ಗುರುತಿಸಿಕೊಂಡಿದ್ದರಿಂದಾಗಿ ಒಕ್ಕಲಿಗ ಮತಗಳು ಹೆಚ್ಚಾಗಿ ಜೆಡಿಎಸ್ ನತ್ತ ಹರಿದು ಹೋಗುತ್ತಿವೆ. ಕ್ಷೇತ್ರದಲ್ಲಿ ಒಕ್ಕಲಿಗ 90 ಸಾವಿರ, ಕುರುಬ 30 ಸಾವಿರ, ಎಸ್ಸಿ-ಎಸ್ಟಿ 35 ಸಾವಿರ, ಮುಸ್ಲಿಂ 20 ಸಾವಿರ, ಲಿಂಗಾಯತ 18 ಸಾವಿರ ಮತದಾರರು ಇದ್ದಾರೆ. ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ನ ಎಚ್.ಡಿ. ರೇವಣ್ಣ 92,713 ಮತಗಳನ್ನು ಗಳಿಸಿ ಭರ್ಜರಿಯಾಗಿ ಜಯಗಳಿಸಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಅನುಪಮಾಗೌಡ 62,665 ಮತಗಳನ್ನು ಗಳಿಸಿ ಸೋಲು ಕಂಡಿದ್ದರು.
ಮಾಜಿ ಸಚಿವ ಜಿ.ಪುಟ್ಟಸ್ವಾಮಿಗೌಡ ಅವರ ಸೊಸೆ ಅನುಪಮಾ ಕಳೆದ 2 ಬಾರಿಯಿಂದ ಸ್ಪರ್ಧಿಸಿ ಸೋಲುಕಂಡಿದ್ದರೂ, ತಮ್ಮ ಪ್ರಯತ್ನವನ್ನು ಬಿಡುತ್ತಿಲ್ಲ. ಈ ಬಾರಿ ಮತ್ತೊಂದು ಪರೀಕ್ಷೆಗೆ ಮುಂದಾಗಿದ್ದಾರೆ. ಆದರೆ ಕ್ಷೇತ್ರದಲ್ಲಿ ಮಾತ್ರ ಬಿಜೆಪಿಗೆ ಅಷ್ಟೊಂದು ವರ್ಚಸ್ಸು ಇಲ್ಲ. ಈಗಾಗಲೇ ಗೌಡರ ಕುಟುಂಬ ಸದಸ್ಯರು ಕ್ಷೇತ್ರದಲ್ಲಿ ತಮ್ಮ ಪ್ರಚಾರ ಕಾರ್ಯ ಪ್ರಾರಂಭಿಸಿದ್ದಾರೆ. ರೇವಣ್ಣ ಅವರ ವರ್ಚಸ್ಸು ಕ್ಷೇತ್ರದಲ್ಲಿ ಪ್ರಬಲವಾಗಿರುವುದರಿಂದ ಈ ಬಾರಿಯೂ ರಾಷ್ಟ್ರೀಯ ಪಕ್ಷಗಳಿಗೆ ಸೋಲು ಕಟ್ಟಿಟ್ಟ ಬುತ್ತಿ, ಹೀಗಾಗಿ ಜೆಡಿಎಸ್ ಭರ್ಜರಿ ಗೆಲುವು ಸಾಧಿಸಿ ಕ್ಷೇತ್ರವನ್ನು ವಶಕ್ಕೆ ಪಡೆಯುವುದರಲ್ಲಿ ಎರಡು ಮಾತಿಲ್ಲ ಎಂದು ಮೂಲಗಳು ತಿಳಿಸಿವೆ.
Comments