ಮಾರ್ಚ್ 11 ಕ್ಕೆ ಕೊರಟಗೆರೆಗೆ ಸಿದ್ದರಾಮಯ್ಯ ಭೇಟಿ... ಇಂದಿರಾ ಕ್ಯಾಂಟೀನ್ ಉದ್ಘಾಟನೆ
ಕೊರಟಗೆರೆ :-ಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜು ನಡೆಯಲಿರುವ ಬೃಹತ್ ಜನಾಶೀರ್ವಾದ ಯಾತ್ರೆಗೆ ಪೂರ್ವ ಸಿದ್ದತೆಯ ತಯಾರಿಯನ್ನು ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ಮತ್ತು ಇಂದಿರಾ ಕ್ಯಾಂಟೀನ್ ಉದ್ಘಾಟನೆಯ ಕೊನೆ ಹಂತದ ಸಿದ್ದತೆಗಳನ್ನು ಪರಿಶೀಲಿಸಿದರು.
ಶನಿವಾರ ಬೆಳಿಗಿನಿಂದಲೂ ಸಂಜೆಯ ವರೆಗೆ ಸಿದ್ದತೆಗಳ ಉಸ್ತುವಾರಿಯನ್ನು ವಹಿಸಿಕೊಂಡು ಪರಂ ಕ್ಷೇತ್ರದಲ್ಲೇ ಇದ್ದರು. ಮೈದಾನದ ಪಕ್ಕದಲ್ಲಿರುವ ಬೈಪಾಸ್ ರಸ್ತೆಯ ಪಕ್ಕದಲ್ಲಿ ವಾಹನಗಳ ನಿಲುಗಡೆ ಮತ್ತು ಹೆಲಿಪ್ಯಾಡ್ ವ್ಯವಸ್ಥೆ ಮಾಡಲಾಗಿದೆ ಮುಖ್ಯ ಮಂತ್ರಿ ಭೇಟಿಯ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದ ಪೊಲೀಸ್ ತುಕಡಿಗಳ ಬಂದೂಬಸ್ತ್ ವ್ಯವಸ್ಥೆ ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟಣ ತಾಲ್ಲೂಕು ಕಚೇರಿ ಮುಂದೆ ನೂತನವಾಗಿ ನಿಮರ್ಾಣವಾಗಿರುವ ಇಂದಿರಾ ಕ್ಯಾಂಟಿನ್ನನ್ನು ಮೊದಲು ಉದ್ಘಾಟಿಸಿ ನಂತರ ವೇದಿಕೆ ಕಾರ್ಯಕ್ರಮಕ್ಕೆ ಬರುವ ಯೋಜನೆಯನ್ನು ತಯಾರಿಸಲಾಗಿದೆ.
ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳೊಂದಿಗೆ ಇಂಧನ ಸಚಿವ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ ಜಯಚಂದ್ರ ಸೇರಿದಂತೆ ಹಲವು ಸಚಿವರು, ಸಂಸದ ಮುದ್ದಹನುಮೇಗೌಡ, ಅಪೆಕ್ಸ್ ಬ್ಯಾಂಕ್,ಡಿಸಿಸಿ ಬ್ಯಾಂಕ್ಗಳ ಅಧ್ಯಕ್ಷರೂ ಆದ ಶಾಸಕ ಕೆ.ಎನ್ ರಾಜಣ್ಣ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು ಸೇರಿದಂತೆ 50 ಸಾವಿರಕ್ಕೂ ಹೆಚ್ಚಿನ ಕಾಂಗ್ರೇಸ್ ಕಾರ್ಯಕರ್ತರು ಬರುವ ನಿರೀಕ್ಷೆಯಿದ್ದು, ಕುಡಿಯುವ ನೀರು, ಊಟದ ವ್ಯವಸ್ಥೆಯನ್ನು ಮಾಡಲಾಗಿದೆ.
ಇಡೀ ಕಾರ್ಯಕ್ರಮದ ಉಸ್ತುವಾರಿಯನ್ನು ಕೆ.ಪಿ.ಸಿ.ಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ನೋಡಿಕೊಳ್ಳುತ್ತಿದ್ದಾರೆ. ರಾಜ್ಯದ ಅತ್ಯಂತ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾದ ಕೊರಟಗೆರೆ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಜವಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ ಜಿ.ಪರಮೇಶ್ವರ್ ಕಾರ್ಯಕ್ರಮ ರಾಜ್ಯವೇ ಕೂತೂಹಲದಿಂದ ಕಾಯುತ್ತಿದ್ದು ಇಬ್ಬರ ಮಧ್ಯೆ ಇಲ್ಲಸಲ್ಲದ ಊಹೆಗಳಿಗೆ ಮತ್ತು ವಿರೋಧ ಪಕ್ಷದ ಗಾಳಿಸುದ್ದಿಗಳಿಗೆ ಈ ಸಮಾರಂಭ ಉತ್ತರ ದೊರೆಯಲಿದೆ ಎಂದು ಹಿರಿಯ ಕಾಂಗ್ರೇಸ್ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. (ಚಿತ್ರ ಗಳಿವೆ)
Comments