ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯಥಿಗಳನ್ನು ಘೋಷಿಸಿದ ದೇವೇಗೌಡರು
ರಾಜ್ಯದಲ್ಲಿ ಜೋನ್ ತಿಂಗಳಿನಲ್ಲಿ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಜೆಡಿಎಸ್ ವರಿಷ್ಟ ಎಚ್.ಡಿ.ದೇವೇಗೌಡರು ಬಿಡುಗಡೆ ಮಾಡಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಈಶಾನ್ಯಾ ಪದವೀಧರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರದ ಅವಧಿ ಜೋನ್ಗೆ ಮುಕ್ತಾಯವಾಗಲಿದ್ದೂ ಈ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಜೆಡಿಎಸ್ ಘೋಷಿಸುವ ಮೂಲಕ ಈಗಿನಿಂದಲೇ ಅಖಾಡಕ್ಕೆ ಇಳಿಯುವಂತೆ ಸೂಚನೆ ನೀಡಿದ್ದಾರೆ.
ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾಗಿ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೆಗೌಡ, ಆಗ್ನೆಯ ಶಿಕ್ಷಕರ ಕ್ಷೇತ್ರದಲ್ಲಿ ಹಾಲಿ ಶಾಸಕರಾಗಿರುವ ರಮೇಶ್ ಬಾಬು, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್.ಬೋಜೇಗೌಡ ಅವರನ್ನು ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಎಲ್.ಆರ್.ಶಿವರಾಮೇಗೌಡ, ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಎನ್ ಪ್ರತಾಪ್ ರೆಡ್ಡಿ, ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಅಶ್ವಿನ್ ಪೆರಾರ ಅವರನ್ನು ಅಭ್ಯರ್ಥಿಗಳೆಂದು ದೇವೇಗೌಡರು ಘೋಷಿಸಿದ್ದು ಈಗಿನಿಂದಲೇ ಪ್ರಚಾರ ಕಾರ್ಯ ಆರಂಭಿಸುವಂತೆ ಸೂಚಿಸಿದ್ದಾರೆ.
Comments