ಹುಷಾರ್! ಎಚ್ ಡಿಡಿ-ಎಚ್ ಡಿಕೆ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನ ಪೋಸ್ಟ್ ಮಾಡಿದವರಿಗೆ ವಿಪತ್ತು..!!
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕುತ್ತಿದ್ದವರ ವಿರುದ್ಧ ಬೆಂಗಳೂರಿನ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಚಿಂತೆ ಇಲ್ಲದ ತುಂಡ ಹೈಕ್ಳ ಸಂಘ, ಅಪ್ಪಟ ಕನ್ನಡಿಗ, ಜೈ ಮೋದಿಜಿ ಎಂಬ ಫೇಸ್‌ಬುಕ್ ಪೇಜ್‌ಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್‌ಗಳನ್ನು ಹಾಕುತ್ತಿದ್ದವರ ವಿರುದ್ಧ ಶ್ರೀ ರಾಂಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜೆಡಿಎಸ್‌ನ ಕಾನೂನು ಘಟಕ ನೀಡಿದ ದೂರಿನ ಆಧಾರದ ಮೇಲೆ ಈ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಬೆಟ್ಟಸ್ವಾಮಿ, ಅಂಕಿತ್ ರಾಜ್, ಅಭಿಲಾಶ್ ಎಂಬುವರು ಈ ಪೇಜ್‌ಗಳನ್ನು ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಆರೋಪಿಗಳು ಜೆಡಿಎಸ್, ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ನಿರಂತರವಾಗಿ ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕುತ್ತಿದ್ದರು ಎಂದು ತಿಳಿದು ಬಂದಿದೆ.
Comments