ಸಿದ್ದರಾಮಯ್ಯ ನವರ ಆಡಳಿತ ಅವಧಿಯ ಬಗ್ಗೆ ಭವಿಷ್ಯ ನುಡಿದ ಎಚ್ ಡಿಕೆ
ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಅರೇಮಲ್ಲೇನಹಳ್ಳಿಯಲ್ಲಿ ನಡೆದ ಜೆಡಿಎಸ್ ವಿಕಾಸಪರ್ವದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ , ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಸಿದ್ದರಾಮಯ್ಯರವರೇ ನಿಮ್ಮ ಅಧಿಕಾರದ ದರ್ಪ ಇನ್ನು ಕೇವಲ 50 ದಿನಗಳು ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗುಡುಗಿದ್ದಾರೆ.ಸರಕಾರ ಸುಳ್ಳು ಲೆಕ್ಕಾಚಾರ ನೀಡಿ ಜನರನ್ನು ವಂಚಿಸುತ್ತಿದೆ ಎಂದು ಅವರು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಅವರು ರೈತರಿಗೆ ಮಾಡಿರುವ ಮೋಸಕ್ಕೆ ಪ್ರತಿಯಾಗಿ ಅವರಿಗೆ ಬುದ್ಧಿ ಕಳಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಸಿದ್ದರಾಮಯ್ಯ ಸರಕಾರ ಸುಳ್ಳು ವರದಿಗಳನ್ನು ನೀಡುವ ಮೂಲಕ ಜನತೆಗೆ ಮೋಸ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
Comments