ಶಿವಣ್ಣ ಜೆಡಿಎಸ್ ಪರ ಪ್ರಚಾರ ಮಾಡುವುದರ ಬಗ್ಗೆ ಮಧು ಬಂಗಾರಪ್ಪ ಹೇಳಿದ್ದು ಹೀಗೆ..!!

13 Mar 2018 5:59 PM |
21761 Report

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶಾಸಕ ಮಧು ಬಂಗಾರಪ್ಪ ಅವರು, ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪರ ಗೀತಾ ಶಿವರಾಜ್ ಕುಮಾರ್ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದರು.ಗೀತಾ ಶಿವರಾಜ್ ಕುಮಾರ್ ಮಾ.19 ರಿಂದ 4 ದಿನ ಮೊದಲ ಹಂತದ ಜಿಲ್ಲಾ ಪ್ರವಾಸ ನಡೆಸಲಿದ್ದಾರೆ. ತೀರ್ಥಹಳ್ಳಿ, ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಭದ್ರಾವತಿ, ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಎರಡನೇ ಹಂತದಲ್ಲಿ ಕಾರವಾರ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ನಡೆಸಲಿದ್ದಾರೆ ಎಂದರು.

ಚಿತ್ರನಟ ಶಿವರಾಜ್ ಕುಮಾರ್ ಪಕ್ಷಾತೀತ ನಾಯಕರಾಗಿದ್ದಾರೆ. ಅವರನ್ನು ಯಾವುದೇ ಕಾರಣಕ್ಕೂ ಪ್ರಚಾರಕ್ಕೆ ಎಳೆದು ತರುವುದಿಲ್ಲ. ಮಾ.25ರ ನಂತರ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ, ಜೊತೆಗೆ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಮುಖಂಡರುಗಳಾದ ಹೆಚ್.ವಿಶ್ವನಾಥ್, ಪಿ.ಜಿ.ಆರ್. ಸಿಂಧ್ಯಾ, ವೈ.ಎಸ್.ವಿ.ದತ್ತಾ, ಬಸವರಾಜ್ ಹೊರಟ್ಟಿ, ಶಶಿಭೂಷಣ್ ಹೆಗ್ಡೆ ಮತ್ತಿತರರು ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

Edited By

Shruthi G

Reported By

hdk fans

Comments