ಜೆಡಿಎಸ್ ನ ಏಳು ಬಂಡಾಯ ಶಾಸಕರಿಗೆ ಬಿಗ್ ಶಾಕ್ ಕೊಟ್ಟ ದೇವೇಗೌಡ್ರು
ಕಳೆದ 2016ರಲ್ಲಿ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ನಾಯಕತ್ವಕ್ಕೆಸೆಡ್ಡು ಹೊಡೆದು ಅಡ್ಡಮತದಾನ ಮಾಡಿದ್ದ ಏಳು ಬಂಡಾಯ ಶಾಸಕರಿಗೆ ಶಾಕ್ ನೀಡಲು ಜೆಡಿಎಸ್ ವರಿಷ್ಠ ದೇವೇಗೌಡ ಮುಂದಾಗಿದ್ದು, ಪಕ್ಷಾಂತರ ನಿಷೇಧ ಕಾಯಿದೆಯಡಿ ಬಂಡಾಯ ಶಾಸಕರ ಅನರ್ಹತೆ ಕೋರಿ ಹೈಕೋರ್ಟ್ ಮೆಟ್ಟಿಲೇರುವ ತೀರ್ಮಾನ ಪ್ರಕಟಿಸಿದ್ದಾರೆ.
ಒಂದೆರಡು ದಿನದಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಸಾಧ್ಯತೆ ಇದೆ. ಈ ಮೂಲಕ ಕಾಂಗ್ರೆಸ್ ಸೇರಲು ಸಜ್ಜಾಗಿರುವ ಹಾಗೂ ಈಗಾಗಲೇ ಆಮಾನತಾಗಿರುವ ಬಂಡಾಯ ಶಾಸಕರಿಗೆ ಕಾನೂನಿನ ಮೂಲಕ ಕಟ್ಟಿಹಾಕುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ದೇವೇಗೌಡ ಅವರು ಅಧಿಕೃತವಾಗಿ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಮತ್ತೆ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಕಾಂಗ್ರೆಸ್ ಪಕ್ಷವು ಮತ್ತಷ್ಟು ಜೆಡಿಎಸ್ ಶಾಸಕರನ್ನು ಸೆಳೆಯುವಲ್ಲಿ ತೊಡಗಿದೆ ಎಂಬುದು ದೇವೇಗೌಡರಲ್ಲಿ ಆಕ್ರೋಶ ಮೂಡಿಸಿದೆ ಎನ್ನಲಾಗಿದೆ.ಜೆಡಿಎಸ್ ನ ಬಂಡಾಯ ಶಾಸಕರು ಈಗಾಗಲೇ ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಸಜ್ಜಾಗಿದ್ದು, ಕಾಂಗ್ರೆಸ್ ಗೆ ಮತ ಚಲಾಯಿಸುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ರಾಜ್ಯಸಭೆ ಚುನಾವಣೆಯಲ್ಲಿ ಬಂಡಾಯ ಶಾಸಕರು ಮತ ಚಲಾಯಿಸದಂತೆ ತಡೆ ಹಾಕಲು ರಾಜಕೀಯ ಲೆಕ್ಕಾಚಾರ ಹಾಕಿರುವ ದೇವೇಗೌಡರು ಕಾನೂನು ಅಸ್ತ್ರದ ದಾಳ ಉರುಳಿಸಲು ಮುಂದಾಗಿದ್ದಾರೆ.
ಈ ನಡುವೆ ಇತ್ತೀಚೆಗೆ ಜೆಡಿಯು ಪಕ್ಷದ ನಾಯಕ ಬಿ.ಎಸ್.ಗೌಡ ಅವರು ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ನ ಏಳು ಬಂಡಾಯ ಶಾಸಕರಿಗೆ ಮತದಾನ ಹಕ್ಕು ನೀಡಬಾರದು ಎಂದು ಚುನಾವಣಾ ಆಯೋಗ ಮತ್ತು ಸಭಾಧ್ಯಕ್ಷರಿಗೆ ದೂರು ನೀಡಿದ್ದರು. ಪಕ್ಷದ ವಿಪ್ ಉಲ್ಲಂಘನೆ ಮಾಡಿದಾಗ ಜೆಡಿಎಸ್ ದೂರು ನೀಡಿತ್ತು. ದೂರು ನೀಡಿ ಒಂದು ವರ್ಷವಾದರೂ ವಿಪ್ ಉಲ್ಲಂಘನೆ ಮಾಡಿದ ಸದಸ್ಯರ ವಿರುದ್ಧ ವಿಧಾನಸಭಾಧ್ಯಕ್ಷರು ಯಾವುದೇ ಕ್ರಮ ಕೈಗೊಂಡಿಲ್ಲ ಜೆಡಿಎಸ್ ನಿಂದ ಏಳು ಶಾಸಕರನ್ನು ಅಮಾನತು ಮಾಡಲಾಗಿದೆ. ಹೀಗಾಗಿ ಅವರು ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕನ್ನು ಕಳೆದುಕೊಂಡಿದ್ದಾರೆ. ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಮೂರು ತಿಂಗಳೊಳಗೆ ಇಂತಹ ವಿಷಯವನ್ನು ಇತ್ಯರ್ಥಗೊಳಿಸಬೇಕು. ಆದರೆ, ಸಭಾಧ್ಯಕ್ಷರು ಈವರೆಗೆ ಯಾವುದೇ ಕ್ರಮ ಗೊಂಡಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದರು.
Comments