ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ, ಜೆಡಿಎಸ್ ಗೆ ಲಾಭ...!!
ಬೆಳಗಾವಿ ದಕ್ಷಿಣ ಕ್ಷೇತ್ರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಬೆಳಗಾವಿಯಲ್ಲಿ ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ನವರು ಎಂ.ಡಿ.ಲಕ್ಷ್ಮೀನಾರಾಯಣ ಅವರಿಗೆ ಟಿಕೆಟ್ ನೀಡಲು ಮುಂದಾಗಿದ್ದಾರೆ. ಎಂ.ಡಿ.ಲಕ್ಷ್ಮೀನಾರಾಯಣ ನನಗೆ ಟಿಕೆಟ್ ಸಿಗುತ್ತೆ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ ಅವನತಿಗೆ ಆರ್‌ಎಸ್ಎಸ್ ಕಾರಣ. ಆದರೆ ಆರ್‌ಎಸ್ಎಸ್ ಮೂಲದಿಂದ ಬಂದಂತಹ ಎಂಎಲ್‌ಸಿ ಎಂ.ಡಿ.ಲಕ್ಷ್ಮಿನಾರಾಯಣಗೆ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲಾಗಿದೆ.
ಎಂ.ಡಿ.ಲಕ್ಷ್ಮಿನಾರಾಯಣ ನಿರಂತರವಾಗಿ ಶೋಭಾ ಕರಂದ್ಲಾಜೆ, ಬಿಎಸ್‌ವೈ ಮತ್ತು ಆರ್‌ಎಸ್ಎಸ್ ಮುಖಂಡರ ಸಂಪರ್ಕದಲ್ಲಿದ್ದಾರೆ. ಲಕ್ಷ್ಮಿನಾರಾಯಣ ಬಿಜೆಪಿಗೆ ಮೆಸೆಂಜರ್ ಆಗಿ ಕೆಲ್ಸಾ ಮಾಡುತ್ತಿದ್ದಾರೆ. ಆರ್‌ಎಸ್ಎಸ್ ಮತ್ತು ಬಿಜೆಪಿ ಹುನ್ನಾರದ ಫಲವಾಗಿ ಲಕ್ಷ್ಮಿನಾರಾಯಣ ಕಾಂಗ್ರೆಸ್ ಸೇರ್ಪಡೆ ಯಾಗಿದ್ದಾರೆ ಎಂದು ಶಂಕರ ಮುನ್ನವಳ್ಳಿ ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ನವರ ಸರ್ಕಾರದೊಂದಿಗೆ ಬೇಸರಗೊಂಡಿರು ಬೆಳಗಾವಿಯ ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಜೆಡಿಎಸ್ ನತ್ತ ಮುಖ ಮಾಡಿದ್ದಾರೆ. ಇದು ‘ಕೈ’ ಪಾಳಯಕ್ಕೆ ಬಾರಿ ಮುಳುವಾಗಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments